ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನ ಎನ್‌ಎಸ್‌ಎಸ್ ವಾರ್ಷಿಕ ಶಿಬಿರ

ಪುತ್ತೂರು: ಸಂತ ಫಿಲೋಮಿನಾ (ಸ್ವಾಯತ್ತ) ಕಾಲೇಜು 2024-25ನೇ ಸಾಲಿನ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಏಳು ದಿನಗಳ ಶಿಬಿರವು ಡಿಜಿಟಲ್ ಸಾಕ್ಷರತೆಗಾಗಿ ಯುವ ಜನತೆ-ನನ್ನ ಭಾರತಕ್ಕಾಗಿ ಯುವ ಜನತೆ ಎಂಬ ಧೈಯ ವಾಕ್ಯದಡಿಯಲ್ಲಿ ಸ.ಹಿ.ಪ್ರಾ ಶಾಲೆ ಅನಡ್ಕ ಶಾಂತಿಗೋಡು ಇಲ್ಲಿ ಫೆ.20 ರಿಂದ 26 ರವರೆಗೆ ನಡೆಯಲಿದೆ.




ಶಿಬಿರವನ್ನು ಕಾಲೇಜಿನ ಪ್ರಾಂಶುಪಾಲ ವಂ. ಡಾ. ಆಂಟನಿ ಪ್ರಕಾಶ್ ಮೊಂತೇರೊ ಅಧ್ಯಕ್ಷತೆಯಲ್ಲಿ ಪ್ರಗತಿಪರ ಕೃಷಿಕ ಹಾಗೂ ಸ.ಹಿ.ಪ್ರಾ. ಶಾಲೆ ಅನಡ್ಕ ಸ್ಥಾಪಕ ಅಧ್ಯಕ್ಷ ರತ್ನಾಕರ್ ವಾರಂಬಳಿತಾಯ ಉದ್ಘಾಟಿಸಲಿದ್ದಾರೆ. 



ಮುಖ್ಯ ಅತಿಥಿಗಳಾಗಿ ಗ್ರಾ.ಪಂ. ಅಧ್ಯಕ್ಷೆ ಹರಿಣಿ ಪಂಜಳ, ಕ್ಷೇತ್ರ ಶಿಕ್ಷಣಾಧಿಕಾರಿಗಳದ ಲೋಕೇಶ್ ಎಸ್.ಆರ್, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ನಾರಾಯಣ ಸುವರ್ಣ.


 ಮುಖ್ಯ ಗುರುಗಳಾದ ಫೆಲ್ವಿಟಾ ಡಿಕುನ್ನ ಆಗಮಿಸಿಲಿದ್ದಾರೆ. ಧ್ವಜಾರೋಹಣ, ಕ್ಯಾಂಪನ್ ಸ್ವಚ್ಛತೆ, ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಂತಹ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.



26 ರಂದು ನಡೆಯಲಿರುವ ಸಮಾರೋಪ ಸಮಾರಂಭಕ್ಕೆ ಕಾಲೇಜಿನ ಸಂಚಾಲಕರಾದ ಅತಿ ವಂದನೀಯ ಲಾರೆನ್ಸ್ ಮಸ್ಕರೇನ್ಹಸ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. 



ಉಪ ಪ್ರಾಂಶುಪಾಲ ಡಾ. ವಿಜಯಕುಮಾರ್ ಮೊಳೆಯರವರು ಸಮಾರೋಪ ಭಾಷಣ ಮಾಡಲಿದ್ದಾರೆ. ಡಾ.ಕೆ. ಚಂದ್ರಶೇಖರ್ ಹಾಗೂ ಪುಷ್ಪ ಎನ್. ಶಿಬಿರ ಅಧಿಕಾರಿಗಳಾಗಿ ಕರ್ತವ್ಯ ನಿರ್ವಹಿಸಲಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.
Next Post Previous Post

Announcement