BREAKING: ಶರಣ್ ಪಂಪ್ ವೆಲ್, ಪುನೀತ್ ಅತ್ತಾವರ ವಿರುದ್ಧ FIR ದಾಖಲು
ಮಂಗಳೂರು: ಜಿಲ್ಲೆಯಲ್ಲಿ ಕೋಮು ಸೌಹಾರ್ಧತೆ ಕದಡುವಂತ ಪೋಸ್ಟ್ ಹಾಕಿದಂತ ಶರಣ್ ಪಂಪವೇಲ್ ಹಾಗೂ ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಶರಣ್ ಪಂಪ್ ವೇಲ್ ಹಾಗೂ ಪುನೀತ್ ಅತ್ತಾವರ ಅವರು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಾಕಿ, ಕೋಮು ಗಲಭೆಗೆ ಪ್ರಚೋದನೆ ನೀಡುವಂತೆ ಮಾಡಿದ್ದರು.
ಈ ಹಿನ್ನಲೆಯಲ್ಲಿ ಮಂಗಳೂರಿನ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಶರಣ್ ಪಂಪ್ ವೇಲ್, ಪುನೀತ್ ಅತ್ತಾವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.