ಇಂದು ಅ.24: ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ | MLC ELLECTION RESULT


ಮಂಗಳೂರು: ವಿಧಾನ ಪರಿಷತ್ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಯ ಮತಗಳ ಎಣಿಕೆ ಕಾರ್ಯವು ಅ.24ರ ನಡೆಯಲಿದೆ. ನಗರದ ಸಂತ ಅಲೋಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಮತ ಎಣಿಕೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಲಾಗಿದೆ.

ಬೆಳಗ್ಗೆ 8ಕ್ಕೆ ಮತಎಣಿಕೆ ಪ್ರಕ್ರಿಯೆ ಆರಂಭವಾಗಲಿದೆ.ಮತ ಎಣಿಕೆಗೆ ಒಂದು ಕೊಠಡಿ ವ್ಯವಸ್ಥೆ ಮಾಡಲಾಗಿದ್ದು, 12 ಮೇಜು ಗಳಲ್ಲಿ ಎಣಿಕೆ ನಡೆಯಲಿದೆ.

ಪ್ರತಿ ಮೇಜಿಗೆ ಒಬ್ಬ ಎಣಿಕೆ ಮೇಲ್ವಿಚಾರಕ, ಒಬ್ಬರು ಸಹಾಯಕರು ಮತ್ತು ಒಬ್ಬರು ಡಿ ಗ್ರೂಪ್ ಸಿಬ್ಬಂದಿ ಇರಲಿದ್ದಾರೆ. ಒಟ್ಟು 392 ಮತ ಪೆಟ್ಟಿಗೆಗಳನ್ನು ಪ್ರತಿ ಟೇಬಲ್ ಗೆ 33ರಂತೆ ಮತಪೆಟ್ಟಿಗೆಗಳನ್ನು ಹಂಚಿಕೆ ಮಾಡ ಲಾಗುತ್ತದೆ.

ಮೊದಲು ಹಂತದಲ್ಲಿ ಒಟ್ಟು ಮತಗಳ ಎಣಿಕೆ ಮತ್ತು ಮಿಶ್ರಣ ಕಾರ್ಯ, ಎರಡನೇ ಹಂತದಲ್ಲಿ ಮತಪತ್ರಗಳ ಸಿಂಧುತ್ವ ಪರಿಶೀಲನೆ ಮಾಡಿ ನಂತರ ಒಂದನೇ ಪ್ರಾಶಸ್ತ್ಯದ ಮತಗಳ ಎಣಿಕೆ ಮಾಡಲಾಗುತ್ತದೆ. ನಿಗದಿತ ಕೋಟವನ್ನು ಮೊದಲ ಪ್ರಾಶಸ್ತ್ಯದಲ್ಲಿ ಪಡೆದ ಅಭ್ಯರ್ಥಿಯ ಆಯ್ಕೆ ಘೋಷಿಸಲಾಗುವುದು.
Next Post Previous Post

Announcement