ರಾಹುಲ್‌ ಗಾಂಧಿ ವಿರುದ್ಧದ ಪಿಐಎಲ್‌ ವಜಾ: ಅರ್ಜಿದಾರರಿಗೆ ₹25 ಸಾವಿರ ದಂಡ ವಿದಿಸಿದ ಹೈಕೋರ್ಟ್ High Court Of Karnataka


ಬೆಂಗಳೂರು: ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ರಾಹುಲ್ ಗಾಂಧಿ ಅವರು ಪ್ರಜ್ವಲ್ ರೇವಣ್ಣ ಅವರು 400 ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುದಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆ ಕಾರಣ ಸಾರ್ವಜನಿಕವಾಗಿ ಸುಳ್ಳು ಹರಡಿದ ಆರೋಪದ ಮೇಲೆ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಹೈಕೋರ್ಟ್ ಗೆ ಪಿಐಎಲ್ ಅರ್ಜಿ ಸಲ್ಲಿಸಲಾಗಿತ್ತು.

ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ನ್ಯಾಯಪೀಠವು, ಅರ್ಜಿಯನ್ನು ವಜಾಗೊಳಿಸಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ನೀಡಿದೆ. ಅಲ್ಲದೇ ಅರ್ಜಿದಾರರಿಗೆ 25,000 ದಂಡವನ್ನು ವಿಧಿಸಿದೆ.

ಪ್ರಜ್ವಲ್ ರೇವಣ್ಣ 400 ಹೆಣ್ಣುಮಕ್ಕಳ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬುದು ಸಾರ್ವಜನಿಕವಾಗಿ ಸುಳ್ಳು ಹರಡಿದಂತೆ ಆಗುತ್ತದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ನಿರ್ದೇಶಿಸುವಂತೆ ಹೈಕೋರ್ಟ್ ಗೆ ಆಲ್ ಇಂಡಿಯಾ ದಲಿತ್ ಆಕ್ಷನ್ ಕಮಿಟಿಯ ಅಧ್ಯಕ್ಷ ಚಿ.ನಾ ರಾಮು ಹಾಗೂ ರಾಷ್ಟ್ರೀಯ ಮಹಿಳಾ ಘಟಕದ ಅಧ್ಯಕ್ಷೆ ಸುಶೀಲಾ ದೇವರಾಜ್ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು.

ಈ ಅರ್ಜಿಯನ್ನು ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ.ವಿ ಅರವಿಂದ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ ನಡೆಸಿತು. ವಾದ ಪ್ರತಿವಾದವನ್ನು ಆಲಿಸಿದಂತ ನ್ಯಾಯಪೀಠವು ಅರ್ಜಿಯಲ್ಲಿ ಯಾವುದೇ ಸಾರ್ವಜನಿಕ ಹಿತಾಸಕ್ತಿ ಇಲ್ಲ ಎಂಬುದಾಗಿ ವಜಾಗೊಳಿಸಿ, ಅರ್ಜಿದಾರರಿಗೆ 25000 ದಂಡವನ್ನು ವಿಧಿಸಿತು.
Next Post Previous Post

Announcement