BREAKING: ಕರ್ನಾಟಕ 'ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್' ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು | Thaawar Chand Gehlot hospitalised
ಮಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿರುವುದಾಗಿ ತಿಳಿದು ಬಂದಿದೆ.
ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು, ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.