ಮಂಗಳೂರು ವಿಶ್ವವಿದ್ಯಾನಿಲಯದ ಕಬಡ್ಡಿ ತಂಡಕ್ಕೆ ಸಂತ ಫಿಲೋಮಿನ (ಸ್ವಾಯತ್ತ) ಕಾಲೇಜಿನ ವಿದ್ಯಾರ್ಥಿ ಮೊಹಮ್ಮದ್ ಮಿಹಾದ್ ಆಯ್ಕೆ
ಪುತ್ತೂರು : ಸೇಂಟ್ ಫಿಲೋಮಿನಾ ಕಾಲೇಜಿನ ದ್ವಿತೀಯ ವರ್ಷದ ಬಿ.ಕಾಂ. ವಿದ್ಯಾರ್ಥಿ ಮೊಹಮ್ಮದ್ ಮಿಹಾದ್, ಮಂಗಳೂರು ವಿಶ್ವವಿದ್ಯಾನಿಲಯದ ಕಬಡ್ಡಿ ತಂಡದಲ್ಲಿ ಸ್ಥಾನ ಪಡೆಯುವ ಮೂಲಕ ಮಹತ್ವದ ಮೈಲುಗಲ್ಲು ಸಾಧಿಸಿದ್ದಾರೆ. ಮುಂಬರುವ ಸೌತ್ ಝೋನ್ ಕಬಡ್ಡಿ ಪಂದ್ಯಾವಳಿಯಲ್ಲಿ ಅವರು ಸಂಸ್ಥೆಯನ್ನು, ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಲಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ವಿವಿಧ ಕಾಲೇಜುಗಳ ಪ್ರತಿಭಾವಂತ ಆಟಗಾರರನ್ನು ಆಯ್ಕೆ ಪ್ರಕ್ರಿಯೆ ಮೂಲಕ ಆಯ್ಕೆ ಮಾಡಿಕೊಂಡಿದ್ದಾರೆ

ಮೊಹಮ್ಮದ್ ಮಿಹಾದ್ ಅವರ ಈ ಸಾಧನೆಯನ್ನು ಕಾಲೇಜಿನ ಪ್ರಾಂಶುಪಾಲ ರೆ.ಡಾ.ಆಂಟೋನಿ ಪ್ರಕಾಶ್ ಮೊಂತೇರೊ ಶ್ಲಾಘಿಸಿದರು. ಇವರಿಗೆ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕರಾದ ಇಲ್ಯಾಸ್ ಪಿಂಟೋ ರವರು ತರಬೇತಿ ನೀಡಿರುತ್ತಾರೆ.