Vitla: ಬೈಕ್ ಡಿಕ್ಕಿ ತಪ್ಪಿಸಲು ಹೋಗಿ ಎರಡು ಬೈಕ್ ಗೆ ಡಿಕ್ಕಿ ಹೊಡೆದು ಪಲ್ಟಿಯಾದ ಕಾರು.!!


ವಿಟ್ಲ : ಕಂಬಳಬೆಟ್ಟು ಮುಖ್ಯ ರಸ್ತೆಗೆ ಏಕಾಏಕಿ ಆಗಮಿಸಿದ ಬೈಕ್ ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿದ ಕಾರು ಬೈಕ್ ಗಳಿಗೆ ಡಿಕ್ಕಿಯಾಗಿ ಪಲ್ಟಿಯಾದ ಘಟನೆ ನಡೆದಿದೆ.


ಬೈಕ್ ಸವಾರ ಅರ್ಕೆಜಾಲು ನಿವಾಸಿ ಯತೀಶ ಗಾಯಗೊಂಡಿದ್ದಾರೆ.


ಕಾರು ಚಾಲಕ ಬೊಳಂತಿಮೊಗರು ನಿವಾಸಿ ಸನನ್ ಅಪಾಯದಿಂದ ಪಾರಾಗಿದ್ದಾರೆ.



ವಿಟ್ಲ ಕಬಕ ರಸ್ತೆಯ ಕಂಬೆಟ್ಟುವಿನಲ್ಲಿ ಅರ್ಕೆಜಾಲು ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ನುಗ್ಗಿದ ಬೈಕ್ ಗೆ ನಿಯಂತ್ರಣ ಕಳೆದುಕೊಂಡ ಕಾರು ಡಿಕ್ಕಿಯಾಗಿದೆ. ಬೈಕ್ ಚರಂಡಿಗೆ ಬಿದ್ದಿದ್ದು, ಕಾರು ರಸ್ತೆಯ ಇನ್ನೊಂದು ಭಾಗದಲ್ಲಿ ನಿಲ್ಲಿಸಿದ್ದ ಬೈಕ್ ಗೆ ಡಿಕ್ಕಿಯಾಗಿ ಮಣ್ಣಿನ ದಿಬ್ಬದ ಮೇಲೆ ಮಗುಚಿ ಬಿದ್ದಿದೆ. ಗಾಯಗೊಂಡ ಬೈಕ್ ಸವಾರನನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಜಖಂ ಗೊಂಡಿದೆ.
Next Post Previous Post

Announcement