Zameer Ahmed Khan: ನಾನು ಮಠದ ಹುಡುಗ, ಆದಿಚುಂಚನಗಿರಿ ಸ್ವಾಮೀಜಿ ಮಡಿಲಲ್ಲಿ ಬೆಳೆದವ ನಾನು; ಜಮೀರ್ ಅಹ್ಮದ್ ಖಾನ್ | ಕರಿಯ ನಿಂದನೆ ವಿಚಾರದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ

ಮಂಗಳೂರು: ಒಕ್ಕಲಿಗರ ಬಗ್ಗೆ ನನಗೆ ಗೌರವ ಇದೆ, ಒಕ್ಕಲಿಗರಿಗೆ ಯಾವ ಹೇಳಿಕೆಯೂ ನೀಡಿಲ್ಲ. ನಾನು ವೈಯಕ್ತಿಕವಾಗಿ ಕುಮಾರಸ್ವಾಮಿಗೆ (HD Kumaraswamy) ಹೇಳಿರುವುದು ಎಂದು ಸಚಿವ ಜಮೀರ್ ಅಹ್ಮದ್ ಖಾನ್ (Zameer Ahmed Khan) ಅವರು ಹೇಳಿದ್ದಾರೆ.ಕರಿಯಾ ನಿಂದನೆ ವಿಚಾರವಾಗಿ ಮಂಗಳೂರಿನಲ್ಲಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಜಮೀರ್ ಅಹ್ಮದ್ ಖಾನ್, ನಾನು ದೇವೇಗೌಡ ಕುಟುಂಬ ಖರೀದಿ ಮಾಡುತ್ತೇನೆ ಅಂತ ಹೇಳಿಲ್ಲ, ಕುಮಾರಸ್ವಾಮಿ ಮುಸ್ಲಿಮರು ನನಗೆ ಬೇಕಾಗಿಲ್ಲ ಅಂತ ಹೇಳಿದ್ರು.



ಈ ಹಿನ್ನೆಲೆಯಲ್ಲಿ ನಾನು ಹೇಳಿಕೆ ನೀಡಿದ್ದು. ಮುಸ್ಲಿಂ ಓಟ್ ಬೇಡ ಅಂತಾ ದುಡ್ಡು ಕೊಟ್ಟು ಖರೀದಿ ಮಾಡುತ್ತಿದ್ದೀರಿ ಅಲ್ವಾ? ಇದು ಎಷ್ಟು ಸರಿ ಅಂತ ಕೇಳಿದ್ದು ಎಂದು ಹೇಳಿದರು.


ಮುಸ್ಲಿಮರು ಪಂಚರ್ ಹಾಕುವವರು, ವೆಲ್ಡಿಂಗ್‌ ಮಾಡುವರು ಅಂತಾ ಲಘುವಾಗಿ ಮಾತಾಡಿದ್ದಾರೆ. ಹೀಗಾಗಿ ಯಾಕೆ ಅವರ ಬಳಿ ಬಂದು ಓಟ್ ಕೇಳುತ್ತೀರಿ? ನಿನ್ನೆ ಕುಮಾರಸ್ವಾಮಿ ಅದೇ ಮಾತು ಹೇಳಿದ್ದಾರೆ ಎಂದ ಜಮೀರ್ ಅಹ್ಮದ್ ಖಾನ್, ಹೌದು ಸ್ವಾಮಿ ನಾವು ಬಡವರು ಅವರ ಬಳಿ ಯಾಕೆ ಓಟ್ ಕೇಳುತ್ತೀರಿ. ಕುಮಾರಸ್ವಾಮಿಗೆ ಅದೇ ಪ್ರಶ್ನೆ ‌ನಂದು, ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯೂ ಟರ್ನ್ ಕುಮಾರಸ್ವಾಮಿ ಅಂತ ಅವರ ಹೆಸರಿದೆ. ಯಾವಾಗ ಬೇಕಾದರೂ ಹೇಗೆ ಬೇಕಾದರೂ ಟರ್ನ್ ಮಾಡುತ್ತಾರೆ ಎಂದು ಹೇಳಿದರು.


ಇನ್ನು, ನಾನು ಜನತಾದಳಕ್ಕೆ ಬರಲು ಕಾರಣ ಆದಿಚುಂಚನಗಿರಿ ಸ್ವಾಮೀಜಿ ಎಂದ ಜಮೀರ್ ಅಹ್ಮದ್ ಖಾನ್, ನಾನು ಮಠದ ಹುಡುಗ, ಆದಿ ಚುಂಚನಗಿರಿ ಮಠದಲ್ಲಿ ಬೆಳೆದಿದ್ದು ನಾನು. ಶೇಖರ್ ಸ್ವಾಮೀಜಿ ಬಳಿ ಕೇಳಲು ಹೇಳಿ, ಪ್ರತಿ ಶನಿವಾರ ನಾನು ಬೆಳಗ್ಗಿನಿಂದ ಸಂಜೆವರೆಗೂ ಮಠದಲ್ಲಿ ಇರುತ್ತೇನೆ. ನಾನು ಸ್ವಾಮೀಜಿ ಮಡಿಲಲ್ಲಿ ಬೆಳೆದವನು. ಇದನ್ನು ಕುಮಾರಸ್ವಾಮಿ ಅವರಲ್ಲಿಯೇ ಕೇಳಿ ಎಂದು ಹೇಳಿದರು.


ಜಮೀರ್ ಅಹ್ಮದ್ ಖಾನ್ ಅವರಿ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ನೀಡಿರುವ ವಿಚಾರದ ಬಗ್ಗೆಯೂ ಮಾತನಾಡಿದ ಸಚಿವರು, ನೋಟಿಸ್ ಬಂದದ್ದು ನನಗೆ ಗೊತ್ತಿಲ್ಲ. ನೋಟಿಸ್ ಕೊಡೋದು ರೂಟೀನ್. ಇಡಿಯವರು ಎಸಿಬಿಗೆ ಪಾವರ್ಡ್ ಮಾಡಿದ್ದಾರೆ. ಕೇಸ್ ಅಲ್ಲಿಂದ ಲೋಕಾಯುಕ್ತ‌ಗೆ ಬಂದಿದೆ. ನೋಟಿಸ್ ಬಂದ ಮೇಲೆ ಹೋಗಲೇ ಬೇಕು ಎಂದು ಹೇಳಿದರು.

Next Post Previous Post

Announcement