BREAKING NEWS: ಮಂಗಳೂರು ಕೋಟೆಕಾರು ಬ್ಯಾಂಕ್'ಗೆ ನುಗ್ಗಿ10 -12 ಕೋಟಿ ಚಿನ್ನ, ನಗದು ಲೂಟಿ.!!! ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚಿಸಲು: ಸ್ಪೀಕರ್ ಯು.ಟಿ ಖಾದರ್ ಸೂಚನೆ

ಮಂಗಳೂರು : ರಾಜ್ಯದಲ್ಲಿ ಸಾಲು ಸಾಲು ದರೋಡೆ ಪ್ರಕರಣ ನಡೆಯುತ್ತಿದ್ದು, ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲಿ ಬ್ಯಾಂಕ್ ದರೋಡೆ ನಡೆಸಲಾಗಿದೆ.
ಮಾಹಿತಿ ಪ್ರಕಾರ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕೋಟೆಕಾರು ಬ್ಯಾಂಕ್' ಗೆ ನುಗ್ಗಿದ ದುಷ್ಕರ್ಮಿಗಳು ಬಂದೂಕು ತೋರಿಸಿ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.


ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, 10 ರಿಂದ 12 ಕೋಟಿ ಚಿನ್ನ, ನಗದು ದರೋಡೆ ಮಾಡಿ ಎಸ್ಕೇಪ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.




ಬಂದೂಕು ತೋರಿಸಿ ಬ್ಯಾಂಕ್ ಸಿಬ್ಬಂದಿಗಳಿಗೆ ಬೆದರಿಕೆಯೊಡ್ಡಿ ಹಣ, ಚಿನ್ನಾಭರಣ ದೋಚಿದ್ದಾರೆ ಎಂಬ ಮಾಹಿತಿ ಇದೀಗ ಲಭ್ಯವಾಗಿದೆ.ಬ್ಯಾಂಕ್ ಗೆ ನುಗ್ಗಿದ ದುಷ್ಕರ್ಮಿಗಳು ಬಂದೂಕಿನಿಂದ ಬ್ಯಾಂಕ್ ಸಿಬ್ಬಂದಿಯನ್ನು ಬೆದರಿಸಿ ಹಣ , ಚಿನ್ನಾಭರಣ ದೋಚಿ ಕಾರಿನಲ್ಲಿ ಎಸ್ಕೇಪ್ ಆಗಿದ್ದಾರೆ. ಹಾಡಹಗಲೇ ಸಿನಿಮೀಯ ರೀತಿಯಲ್ಲಿ ದರೋಡೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.




ಘಟನೆ ನಡೆದ ಸ್ಥಳಕ್ಕೆ ಉಳ್ಳಾಲ ಠಾಣೆ ಪೊಲೀಸರು ಹಾಗೂ ಶ್ವಾನದಳ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ ಮಾಡಲು ಸೂಚನೆ ನೀಡಲಾಗಿದೆ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ.

Next Post Previous Post

Announcement