Lakshmi Hebbalkar: ಬೆಳಗಾವಿಯಲ್ಲಿ ಸಚಿವೆ ಲಕ್ಷ್ಮೀ ‌ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ! ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿ ನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ.

ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ. ನಾಯಿಗೆ ಡಿಕ್ಕಿ ತಪ್ಪಿಸಲು ಹೋಗಿ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ.ಬೆಳಗ್ಗೆ ಆರು ಘಂಟೆಯ ಸಮಯದಲ್ಲಿ ಕಾರು ಅಪಘಾತವಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬೆಳಗಾವಿ ಖಾಸಗಿ ಆಸ್ಪತ್ರೆಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ದಾಖಲಾಗಿದ್ದಾರೆ. ಸಿಎಲ್ ಪಿ ಸಭೆ ಮುಗಿಸಿ ನಿನ್ನೆ ತಡರಾತ್ರಿ ಬೆಂಗಳೂರಿನಿಂದ ಬೆಳಗಾವಿಗೆ ಹೊರಟ್ಟಿದ್ದ ಲಕ್ಷ್ಮೀ ಹೆಬ್ಬಾಳಕರ್ ರಸ್ತೆ ಮಾರ್ಗದ ಮೂಲಕ ಬರುತ್ತಿದ್ದರು. ಅಂಬಡಗಟ್ಟಿ ಗ್ರಾಮದ ಬಳಿ ಅಡ್ಡಬಂದ ನಾಯಿ ತಪ್ಪಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿಯಾಗಿದೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆನ್ನು, ಮುಖಕ್ಕೆ ಸಣ್ಣಪುಟ್ಟ ಗಾಯವಾಗಿದ್ದು, ಎಂಎಲ್​ಸಿ ಚೆನ್ನರಾಜ ಹಟ್ಟಿಹೊಳಿ ತಲೆಗೆ ಗಾಯಯಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳಕರ್​ಗೆ ಬೆಳಗಾವಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Next Post Previous Post

Announcement