BREAKING NEWS: ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್


ಮೈಸೂರು: ಮಹತ್ವದ ಬೆಳವಣಿಗೆಯೊಂದರಲ್ಲಿ ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಿಲೀಫ್ ಸಿಕ್ಕಿದೆ. ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ಸೇರಿ ನಾಲ್ವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಲೋಕಾಯುಕ್ತ ಪೊಲೀಸರು ಬಿ ರಿಪೋರ್ಟ್ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.


ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಬಾಮೈದ ಮಲ್ಲಿಕಾರ್ಜುನ ಹಾಗೂ ಜಮೀನು ಮಾಲೀಕ ದೇವರಾಜು ಅವರಿಗೆ ಲೋಕಾಯುಕ್ತ ಕ್ಲೀನ್ ಚಿಟ್ ನೀಡಿದೆ.


ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ ಸೇರಿ ನಾಲ್ವರ ವಿರುದ್ಧ ಸಾಕ್ಷಾಧಾರ ಕೊರತೆಯಿದೆ. ನಾಲ್ವರ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ತಿಳಿಸಿದೆ. ಈ ಬಗ್ಗೆ ವಿರೋಧವಿದ್ದರೆ ಒಂದು ವಾರದಲ್ಲಿ ಆಕ್ಷೇಪ ಸಲ್ಲಿಸುವಂತೆ ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಿದೆ ಎಂದು ತಿಳಿದುಬಂದಿದೆ.


ಈ ಬಗ್ಗೆ ಸ್ವತಃ ಸ್ನೇಹಮಯಿ ಕೃಷ್ಣ ಮಾಹಿತಿ ನೀಡಿದ್ದು, ಮುಡಾ ಹಗರಣ ಸಂಬಂಧ ಬಿ ರಿಪೋರ್ಟ್ ಸಲ್ಲಿಸಲು ಲೋಕಾಯುಕ್ತ ಸಿದ್ಧತೆ ನಡೆಸಿದೆ ಎಂದು ತಿಳಿಸಿದ್ದಾರೆ.

Next Post Previous Post

Announcement