ರಾಜ್ಯದ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಹಣದ ಬದಲು ಅಕ್ಕಿ ವಿತರಣೆ.!

ಬೆಂಗಳೂರು : ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ ಕೆಲ ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಹೆಚ್ಚುವರಿ 5 ಕೆಜಿ ಅಕ್ಕಿಯ ಹಣ ಬ್ಯಾಂಕ್ ಖಾತೆಗಳಿಗೆ ಕಳೆದ 3 ತಿಂಗಳಿಂದ ಜಮೆಯಾಗಿಲ್ಲ. ಹೀಗಾಗಿ ಫಲಾನುಭವಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ನಿಗದಿತ ಸಮಯಕ್ಕೆ ಡಿಬಿಟಿ ಮೂಲಕ ಫಲಾನುಭವಿಗಳ ಖಾತೆಗೆ ಪಡಿತರದ ಅಕ್ಕಿ ಹಣ ಜಮಾ ಮಾಡುತ್ತಿಲ್ಲ.


ಕೆಲವು ತಿಂಗಳು ತಾಂತ್ರಿಕತೆಯ ಸಮಸ್ಯೆ ನೆಪವೊಡ್ಡಿ ವಿಳಂಬ ಆಗಿದೆ. ಇದೀಗ ಹಣದ ಬದಲಿಗೆ ಅಕ್ಕಿ ಕೊಡಲು ಚಿಂತನೆ ನಡೆದಿದೆ. ಆದರೆ ಅಕ್ಕಿ, ಹಣ ಎರಡು ಕೂಡ ಫಲಾನುಭವಿಗಳಿಗೆ ಸಿಗದೇ ತೊಂದರೆಯಾಗಿದೆ. ಇದನ್ನು ಮನಗಂಡು ಹೆಚ್ಚುವರಿ ಐದು ಕೆಜಿ ಅಕ್ಕಿಯನ್ನೇ ನೀಡಲು ಸರ್ಕಾರ ಚಿಂತನೆ ನಡೆಸಿದೆ

ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ದಾರರಿಗೆ ಹಣದ ಬದಲು ಅಕ್ಕಿ ವಿತರಿಸುವ ಸಾಧ್ಯತೆ ಇದೆ. ಅಕ್ಕಿ ಪಡೆಯಲು ಆಹಾರ ಇಲಾಖೆ ಪ್ರಯತ್ನಿಸಿದ್ದು, ಇದೇ ಕಾರಣಕ್ಕೆ ಹಣದ ವರ್ಗಾವಣೆ ಸ್ಥಗಿತವಾಗಿದೆ ಎನ್ನುವ ಮಾತುಗಳು ಕೇಳಿ ಬಂದಿವೆ.

Next Post Previous Post

Announcement