ಪುತ್ತೂರು ಹಲವು ದಶಕಗಳ ಬೇಡಿಕೆ: ಪುತ್ತೂರಿಗೆ ಹೊಸ ಮೆಡಿಕಲ್ ಕಾಲೇಜು | ರಾಜ್ಯ ಬಜೆಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ KARNATAKA BUDGET 2025- 26

ಪುತ್ತೂರು: ಪುತ್ತೂರಿನ ಹಲವು ದಶಕಗಳ ಬೇಡಿಕೆಯಾದ ಸರಕಾರಿ ವೈದಕೀಯ ಕಾಲೇಜ್ ಸ್ಥಾಪನೆಯ ಕನಸ್ಸು ಕೊನೆಗೂ ಈಡೇರಿದೆ. ಶಾಸಕ ಅಶೋಕ್ ರೈಯವರ ಭಗೀರಥ ಪ್ರಯತ್ನಕ್ಕೆ ಯಶಸ್ಸು ಸಿಕ್ಕಿದ್ದು , ಸಿ ಎಂ ಸಿದ್ದರಾಮಯ್ಯ ಇಂದು ವಿಧಾನಸಭೆಯಲ್ಲಿ ಮಂಡಿಸಿದ ಬಜೆಟ್ ನಲ್ಲಿ ಪುತ್ತೂರಿಗೆ ಹೊಸ ಸರಕಾರಿ ವೈದಕೀಯ ಕಾಲೇಜ್ ಘೋಷಿಸಿದ್ದಾರೆ.



ಪುತ್ತೂರಿನಲ್ಲಿ ಹೊಸ ಮೆಡಿಕಲ್ ಕಾಲೇಜ್ ಸ್ಥಾಪಿಸಲು ಉದ್ಧೇಶಿಸಲಾಗಿದೆ. ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮಾರ್ಥ್ಯದ ತಾಲೂಕು ಆಸ್ಫತ್ರೆಯನ್ನು ಉನ್ನತಿಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮ ವಹಿಸಲಾಗುವುದು ಎಂದು ಬಜೆಟ್ ಪತ್ರದಲ್ಲಿ ತಿಳಿಸಲಾಗಿದೆ.



ಕಳೆದ ವಿಧಾನಸಭೆ ಚುನಾವಣೆ ಸಂದರ್ಭ ಪುತ್ತೂರಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪಿಸುವುದಾಗಿ ಶಾಸಕ ಅಶೋಕ್ ರೈಯವರು ಘೋಷಿಸಿದ್ದರು . ತಾವು ಶಾಸಕರಾಗಿ ಆಯ್ಕೆಯಾದ ಬಳಿಕ ರಂತರವಾಗಿ ಅಶೋಕ್ ರೈಯವರು ಸರಕಾರದ ಮೇಲೆ ಒತ್ತಡ ಹಾಕುವ ಕಾರ್ಯ ಮಾಡಿದ್ದರು. ಕಂದಾಯ ಇಲಾಖೆಯ ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳ ಮೂಲಕ ವೈದ್ಯಕೀಯ ಕಾಲೇಜು ಪ್ರಸ್ತಾವನೆಯನ್ನು ಸರಕಾರದ ತುತ್ತತುದಿಗೆ ಮುಟ್ಟಿಸುವ ಪ್ರಯತ್ನ ಮಾಡಿದ್ದರು.





ಬಜೆಟ್ ಮೇಲೆ ಒತ್ತಡ:

ಕಳೆದ ವರ್ಷದ ಬಜೆಟ್‌ನಲ್ಲಿಯೇ ಮೆಡಿಕಲ್ ಕಾಲೇಜು ಘೋಷಣೆಗೆ ಒತ್ತಡ ಹಾಕಿದ್ದ ಶಾಸಕ ಅಶೋಕ್ ಕುಮಾರ್ ರೈ ಅವರು, ಅದು ಈಡೇರದಿದ್ದಾಗ 2025ರ ಬಜೆಟ್‌ನಲ್ಲಿ ಘೋಷಣೆ ಮಾಡಲೇಬೇಕು ಎಂದು ಸಿಎಂ, ಡಿಸಿಎಂ, ವೈದ್ಯಕೀಯ ಶಿಕ್ಷಣ, ಆರೋಗ್ಯ ಸಚಿವರ ಸಹಿತ ಸರಕಾರದ ಮೇಲೆ ಒತ್ತಡ ಹಾಕುತ್ತಲೇ ಬಂದಿದ್ದರು ಮುಖ್ಯಮಂತ್ರಿಗಳನ್ನು ಹಲವು ಬಾರಿ ಖುದ್ದು ಭೇಟಿ ಮಾಡಿ ಮನವಿ ಮಾಡಿದ್ದರು.ಇತ್ತೀಚೆಗೆ ಸಿಎಂ ಸಿದ್ದರಾಮಯ್ಯ ಮಂಗಳೂರಿಗೆ ಬಂದಿದ್ದಾಗಲೂ ಅವರ ಜತೆ ಖಾಸಗಿಯಾಗಿ 10 ನಿಮಿಷ ಮಾತನಾಡಿದ್ದ ಶಾಸಕ ರೈ, ಮೆಡಿಕಲ್ ಕಾಲೇಜು ಕುರಿತು ಬೇಡಿಕೆಯನ್ನು ಮುಂದಿರಿಸಿದ್ದರು.ಈ ಸಂದರ್ಭ'ఆయు నణ' ఉందు సిఎం వీళిరువుదు మడెకలో కాలేబు గురిక నిరిక్షి ಮತ್ತಷ್ಟು ಹೆಚ್ಚಿಸಿತ್ತು ಬಜೆಟ್ ಅಧಿವೇಶನದ ಮೊದಲು ಶಾಸಕ ರೈ ಮತ್ತೊಮ್ಮೆ ಸಿಎಂ ಅವರನ್ನು ಭೇಟಿಯಾಗಿ ಮೆಡಿಕಲ್ ಕಾಲೇಜು ಕುರಿತ ಬೇಡಿಕೆಯನ್ನು ನೆನಪಿಸಿದ್ದಾರೆ.ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು




ಸಿಎಂ ಅಭಿನಂದಿಸಲು ಕಾಂಗ್ರೆಸ್ ಕಾಯಕರ್ತರು ಬೆಂಬೆಂಗಳೂರಿಗೆ

 ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಾ.7ರಂದು ಮಂಡಿಸಲಿರುವ ಬಜೆಟ್‌ನಲ್ಲಿ ಪುತ್ತೂರಿಗೆ ಮೆಡಿಕಲ್ ಕಾಲೇಜು ಘೋಷಣೆ ಮಾಡುವುದು ಬಹುತೇಕ ಖಚಿತವಾಗಿದ್ದ ಕಾರಣ ಪುತ್ತೂರು ಬ್ಲಾಕ್ ಕಾಂಗ್ರೆಸ್‌ನಿಂದ ಮುಖ್ಯ ಮಂತ್ರಿಯವರನ್ನು ಸನ್ಮಾನಿಸಲು ಸಿದ್ಧತೆ ಮಾಡಿಕೊಂಡಿದ್ದು ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರು ತೆರಳಿದ್ದಾರೆ..

Next Post Previous Post

Announcement