ರಾಜ್ಯದಲ್ಲಿ ಇನ್ನೂ ಒಂದು ವಾರ `ಬೇಸಿಗೆ ಮಳೆ' ಅಬ್ಬರ : ದಕ್ಷಿಣ ಕನ್ನಡ , ಉಡುಪಿ ಸೇರಿದಂತೆ ಇತರೆ ಜಿಲ್ಲೆಗಳಲ್ಲಿ`ಯೆಲ್ಲೋ ಅಲರ್ಟ್' ಘೋಷಣೆ.!

ಮಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.17 ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ಚಾಮರಾಜನಗರ, ಮೈಸೂರು ಜಿಲ್ಲೆಗಳಲ್ಲಿ ಏ.17 ರವರೆಗೆ ರಾಜ್ಯದ ಹಲವು ಕಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ , ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Next Post Previous Post

Announcement