ಮಂಗಳೂರು|ಎ.18 ವಕ್ಫ್ ತಿದ್ದುಪಡಿ ವಿರುದ್ಧ ಉಲಮಾ ಒಕ್ಕೂಟದ ಪ್ರತಿಭಟನೆಯ ಯಶಸ್ವಿಗೆ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲೆ ಕರೆ
ಮಂಗಳೂರು: ಕೇಂದ್ರ ಸರಕಾರದ ಅಸಂವಿಧಾನಿಕ ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ವತಿಯಿಂದ ಎ.18 ರಂದು ಮಂಗಳೂರಿನ ಶಾ ಗಾರ್ಡನ್ ಅಡ್ಯಾರ್ ಕಣ್ಣೂರಿನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆಯನ್ನು ಯಶಸ್ವಿಗೊಳಿಸುವಂತೆ ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.
ತಲೆತಲಾಂತರಗಳಿಂದ ಮುಸ್ಲಿಮರು ರಕ್ಷಿಸಿಕೊಂಡು ಬರುತ್ತಿರುವ ವಕ್ಫ್ ಸೊತ್ತುಗಳನ್ನು ಕಬಳಿಸುವ ಹುನ್ನಾರವನ್ನು ಹೊಂದಿರುವ ಕೇಂದ್ರ ಸರಕಾರದ ನೂತನ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಮರು ನಿರಂತರವಾಗಿ ತಿರಸ್ಕರಿಸಿದ್ದಾರೆ.
ಈ ಕುರಿತು ಕರ್ನಾಟಕ ಉಲಮಾ ಒಕ್ಕೂಟವು ಕರೆ ನೀಡಿರುವ ವಕ್ಫ್ ಸಂರಕ್ಷಣಾ ಬೃಹತ್ ಪ್ರತಿಭಟನೆಯನ್ನು ಯಶಸ್ವಿಗೊಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ, ದ.ಕ ಈಸ್ಟ್ ಜಿಲ್ಲಾ ವ್ಯಾಪ್ತಿಯ ಎಲ್ಲಾ ಎಸ್ಸೆಸ್ಸೆಫ್ ಯುನಿಟ್ ಗಳಿಂದ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿ ಯಶಸ್ವಿಗೊಳಿಸಲು ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಕರೆ ನೀಡಿದೆ.