BREAKING : ಯೂಟ್ಯೂಬರ್ ಸಮೀರ್ ವಿರುದ್ಧ ರೂ.10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು!


ಬೆಂಗಳೂರು: ಇತ್ತೀಚಿಗೆ ಸಾಮಾಜಿಕ ಜಾಲತಾಣದಲ್ಲಿ ಅತಿ ಹೆಚ್ಚು ಟ್ರೆಂಡಿಂಗ್ ನಲ್ಲಿ ಬಂದಂತಹ ವಿಷಯ ಅಂದರೆ ಅದು ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ. ಇದೀಗ ವಿದ್ಯಾರ್ಥಿನಿ ಸೌಜನ್ಯಾ ಕೊಲೆ ಹಾಗೂ ಅತ್ಯಾಚಾರ ಪ್ರಕರಣ ಸಂಬಂಧ ಕೋರ್ಟ್ ಆದೇಶ ಉಲ್ಲಂಘಿಸಿ ಎರಡನೆ ವಿಡಿಯೊ ಬಿಟ್ಟಿರುವ ಆರೋಪ ಹಿನ್ನೆಲೆ ʼದೂತʼ ಹೆಸರಿನ ಯೂಟ್ಯೂಬರ್ ಸಮೀರ್ ಸಮೀರ್ ಎಂಡಿ ವಿರುದ್ಧ 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.


ಪ್ರರಕಣ ಸಂಬಂಧ 10 ಕೋಟಿ ಮಾನನಷ್ಟ ಮೊಕದ್ದಮೆಯನ್ನು ಧರ್ಮಸ್ಥಳ ಡಿ.ಹರ್ಷೇಂದ್ರ ಕುಮಾರ್ ಮತ್ತು ನಿಶ್ಚಲ್ ಡಿ.ಹೂಡಿದ್ದಾರೆ. ನ್ಯಾಯಾಲಯವು ಯೂಟ್ಯೂಬರ್ ಗೆ ನೋಟೀಸ್ ಜಾರಿ ಮಾಡಿ, ಹಾಜರಾಗುವಂತೆ ಸೂಚನೆಯನ್ನು ನೀಡಿದೆ. ಮುಖ್ಯವಾಗಿ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಹರಿಬಿಟ್ಟಿದ್ದ ವಿಡಿಯೊ ತಕ್ಷಣ ಡಿಲೀಟ್ ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಧೀಶ ಎಸ್. ನಟರಾಜ್ ಈ ಆದೇಶ ಮಾಡಿದ್ದಾರೆ.

ಸೌಜನ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ಧರ್ಮಸ್ಥಳವನ್ನು ಗುರಿಯಾಗಿಸಿಕೊಂಡು ಈ ಹಿಂದೆ ಮಾಡಿರುವ ವಿಡಿಯೊ ತೆಗೆದುಹಾಕುವಂತೆ ಮತ್ತು ಈ ಕುರಿತು ವಿಡಿಯೊ ಮಾಡದಂತೆ ತಡೆಯಾಜ್ಞೆ ನೀಡಿತ್ತು. ಆದರೆ, ನ್ಯಾಯಾಲಯದ ತಡೆಯಾಜ್ಞೆ ಅದೇಶವನ್ನು ಉಲ್ಲಂಘಿಸಿ, ಎರಡನೆ ವಿಡಿಯೋ ಬಿಟ್ಟಿರುವ ಹಿನ್ನೆಲೆ ಸಮೀರ್ ಎಂಡಿ ಮೇಲೆ ಮಾನಷ್ಟ ಮೊಕದ್ದಮೆ ದಾಖಲಾಗಿದೆ.

Next Post Previous Post

Announcement