BREAKING NEWS: ಪತ್ನಿಯಿಂದಲೇ ಭೀಕರವಾಗಿ ಕೊಲೆಯಾದ ಕರ್ನಾಟಕದ ನಿವೃತ್ತ ಪೊಲೀಸ್ ಮಹಾ ನಿರ್ದೇಶಕ ಓಂ ಪ್ರಕಾಶ್!
ಇವರು ಬೆಂಗಳೂರಿನ ಹೆಚ್‌ಎಸ್‌ಆರ್ ಲೇಔಟ್‌ನಲ್ಲಿ ವಾಸವಾಗಿದ್ದರು. ಇನ್ನು ಭಾನುವಾರ ಮಧ್ಯಾಹ್ನದ ವೇಳೆ ಓಂ ಪ್ರಕಾಶ್ ಅವರು ಮನೆಯಲ್ಲಿ ರಕ್ತಸಿಕ್ತವಾಗಿ ಬಿದ್ದಿದ್ದರು. ಪರಿಶೀಲನೆ ಮಾಡಿದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ. ಇನ್ನು ಓಂ ಪ್ರಕಾಶ್ ಅವರನ್ನು ಸ್ವತಃ ಅವರ ಹೆಂಡತಿ ಪಲ್ಲವಿ ಅವರೇ ಕೊಲೆ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ. ಈ ಘಟನೆ ತಿಳಿದ ಬೆನ್ನಲ್ಲಿಯೇ ಸ್ಥಳಕ್ಕೆ ತೆರಳಿದ ಪೊಲೀಸರು ಸ್ಥಳ ಪರಿಶೀಲನೆ ಮಾಡಿದ್ದಾರೆ. ಈ ವೇಳೆ ಹೆಂಡಿಯೇ ಕೊಲೆ ಮಾಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಅವರನ್ನು ವಶಕ್ಕೆ ಪಡೆದು ವಿಚಾರಣೆ ಮಾಡುತ್ತಿದ್ದಾರೆ.
ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದ ಓಂ ಪ್ರಕಾಶ್:
ಓಂ ಪ್ರಕಾಶ್ ಕುಟುಂಬದಲ್ಲಿ ಹಣಕಾಸಿನ ಸಮಸ್ಯೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಮಾಜಿ ಡಿಜಿ ಮತ್ತು ಐಜಿಪಿ ಅಧಿಕಾರಿ ಓಂ ಪ್ರಕಾಶ್ ಅವರು ಸಾಕಷ್ಟು ಸಾಲ ಮಾಡಿಕೊಂಡಿದ್ದರು. ಹಣಕಾಸಿನ ವಿಚಾರವಾಗಿ ಆಗಾಗ್ಗೆ ಮನೆಯಲ್ಲಿ ಜಗಳ ಕೂಡ ನಡೆಯುತ್ತಿತ್ತು. ಇದೇ ಜಗಳ ಕೊಲೆಗೆ ಕಾರಣ ಆಗಿರುವ ಬಗ್ಗೆ ಪೊಲೀಸರಿಗೆ ಅನುಮಾನ ವ್ಯಕ್ತವಾಗಿದೆ. ಮತ್ತೊಂದೆಡೆ, ಓಂ ಪ್ರಕಾಶ್ ಅವರು ಸಂಪಾದನೆ ಮಾಡಿದ್ದ ಆಸ್ತಿಯನ್ನು ಹೆಂಡತಿಗೆ ಕೊಡದೇ ನೇರವಾಗಿ ಮಗನ ಹೆಸರಿಗೆ ಬರೆದಿದ್ದರು. ಇದೇ ಕಾರಣಕ್ಕೆ ಹೆಂಡತಿ ಕೋಪಗೊಂಡು ಕೊಲೆ ಮಾಡಿದ್ದಾರೆ ಎಂಬ ಆರೋಪವೂ ಕೇಳಿಬರುತ್ತಿದೆ. ತನಿಖೆಯ ನಂತರವೇ ಸತ್ಯಾಂಶ ಹೊರಬರಬೇಕಿದೆ.
ಇನ್ನು ಓಂ ಪ್ರಕಾಶ್ ಬಿಹಾರ ಮೂಲದವರು. ಬಿಹಾರ ರಾಜ್ಯದ ಚಂಪಾರಣ್ ಜಿಲ್ಲೆಯ ಓಂ ಪ್ರಕಾಶ್ ಅವರು ಐಪಿಎಸ್ ಅಧಿಕಾರಿಯಾದ ನಂತರ ಮೊದಲ ಬಾರಿಗೆ ಅಂದಿನ ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ಎಎಸ್‌ಪಿ ಆಗಿ ರಾಜ್ಯದಲ್ಲಿ ವೃತ್ತಿ ಆರಂಭ ಮಾಡಿದ್ದರು. ಇದಾದ ನಂತರ ಶಿವಮೊಗ್ಗ, ಉತ್ತರಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ವಿಜಿಲೇನ್ಸ್ ಸೆಲ್‌ನ ಎಸ್‌ಪಿಯಾಗಿ, ಕರ್ನಾಟಕ ಲೋಕಾಯುಕ್ತದಲ್ಲಿ, ಅಗ್ನಿಶಾಮಕ ದಳದ ಡಿಐಜಿ, ಸಿಐಡಿ ಐಜಿಪಿಯಾಗಿ ಕರ್ತವ್ಯ ನಿರ್ವಹಣೆ ಮಾಡಿದ್ದರು. 2015 ಮಾರ್ಚ್‌ನಲ್ಲಿ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕವಾಗಿದ್ದ ಓಂ ಪ್ರಕಾಶ್ ಅವರು 2017ರಲ್ಲಿ ನಿವೃತ್ತಿ ಹೊಂದಿದ್ದರು.
ಅವರ ವೃತ್ತಿಜೀವನದ ಬಗ್ಗೆ ಹೆಚ್ಚಿನ ವಿವರ ಇಲ್ಲಿದೆ: ಆರಂಭಿಕ ವೃತ್ತಿಜೀವನ: ಅವರು ಬಳ್ಳಾರಿಯ ಹರಪನಹಳ್ಳಿಯಲ್ಲಿ ಎಎಸ್ಪಿ ಆಗಿ ಸೇವೆ ಸಲ್ಲಿಸಿದರು. ಅವರು ರಾಜ್ಯ ವಿಜಿಲೆನ್ಸ್ ಆಯೋಗ, ಲೋಕಾಯುಕ್ತ ಮತ್ತು ವಿವಿಧ ಜಿಲ್ಲೆಗಳಲ್ಲಿ ಎಸ್ಪಿ ಹುದ್ದೆಗಳಿಗೆ ಬಡ್ತಿ ಪಡೆದರು. 1993ರಲ್ಲಿ ಭಟ್ಕಳ ಕೋಮು ಗಲಭೆಯನ್ನು ನಿರ್ವಹಿಸಿದರು ಮತ್ತು ಡಿಐಜಿ (ಆಡಳಿತ), ಡಿಐಜಿ-ಉತ್ತರ ವಲಯ, ಡಿಐಜಿ-ತರಬೇತಿ ಮತ್ತು ಡಿಐಜಿ ಅಗ್ನಿಶಾಮಕ ದಳವಾಗಿ ಸೇವೆ ಸಲ್ಲಿಸಿದರು. ಅವರನ್ನು ಸಿಐಡಿಯಲ್ಲಿ ನೇಮಿಸಲಾಯಿತು ಮತ್ತು ಸಾರಿಗೆ ಆಯುಕ್ತರಾಗಿಯೂ ಕೆಲಸ ಮಾಡಿದರು. ಎಡಿಜಿಪಿ (ಅಪರಾಧ ಮತ್ತು ತಾಂತ್ರಿಕ ಸೇವೆಗಳು) ಮತ್ತು ಎಡಿಜಿಪಿ (ಕುಂದುಕೊರತೆಗಳು ಮತ್ತು ಮಾನವ ಹಕ್ಕುಗಳು) ಆಗಿ ಸೇವೆ ಸಲ್ಲಿಸಿದ್ದರು. ಡಿಜಿಪಿ ಮತ್ತು ಐಜಿಪಿ: ಫೆಬ್ರವರಿ 28, 2015 ರಂದು ಡಿಜಿ ಮತ್ತು ಐಜಿಪಿಯಾಗಿ ಅಧಿಕಾರ ವಹಿಸಿಕೊಂಡು ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.