BREKING NEWS: ಕ್ರೈಸ್ತ ಧರ್ಮದ ಕ್ಯಾಥೋಲಿಕ್ ಪರಮೋಚ್ಚ ಧರ್ಮಗುರು ಪೋಪ್ ಫ್ರಾನ್ಸಿಸ್ ನಿಧನ Pope Francis passes away:
ವ್ಯಾಟಿಕನ್ ಸಿಟಿ: ರೋಮನ್ ಕ್ಯಾಥೋಲಿಕ್‌ನ ಮೊದಲ ಲ್ಯಾಟಿನ್ ಅಮೆರಿಕನ್ ಮೂಲದ ಪೋಪ್ ಫ್ರಾನ್ಸಿಸ್ ನಿಧನರಾಗಿದ್ದಾರೆ ಎಂದು ವ್ಯಾಟಿಕನ್ ಸಿಟಿ ಸೋಮವಾರ ವಿಡಿಯೊ ಹೇಳಿಕೆಯಲ್ಲಿ ತಿಳಿಸಿದೆ.
ಅವರಿಗೆ 88 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಡಬಲ್ ನ್ಯುಮೋನಿಯಾದ ಗಂಭೀರ ಆರೋಗ್ಯ ಸಮಸ್ಯೆಯಿಂದ ಚೇತರಿಸಿಕೊಂಡಿದ್ದರು.
'ಆತ್ಮೀಯ ಸಹೋದರ ಸಹೋದರಿಯರೇ, ನಮ್ಮ ಫಾದರ್ ಫ್ರಾನ್ಸಿಸ್ ಅವರು ನಿಧನರಾಗಿರುವುದನ್ನು ನಾನು ಅತೀವ ದುಃಖದಿಂದ ಘೋಷಿಸುತ್ತಿದ್ದೇನೆ ' ಎಂದು ಕಾರ್ಡಿನಲ್ ಕೆವಿನ್ ಫಾರೆಲ್, ವ್ಯಾಟಿಕನ್‌ನ ಟಿವಿ ಚಾನೆಲ್‌ನಲ್ಲಿ ಘೋಷಿಸಿದ್ದಾರೆ.
ಇಂದು ಬೆಳಿಗ್ಗೆ 7.35ಕ್ಕೆ, ರೋಮ್‌ನ ಬಿಷಪ್ ಫ್ರಾನ್ಸಿಸ್ ಅವರು ನಿಧನರಾದರು. ಅವರ ಇಡೀ ಜೀವನವು ಭಗವಂತನ ಸೇವೆ ಮತ್ತು ಚರ್ಚ್‌ಗೆ ಸಮರ್ಪಿತವಾಗಿತ್ತು ಎಂದು ಫಾರೆಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾರ್ಜ್ ಮಾರಿಯೊ ಬರ್ಗೊಗ್ಲಿಯೊ(ಪೋಪ್ ಫ್ರಾನ್ಸಿಸ್) 2013ರ ಮಾರ್ಚ್ 13ರಂದು ಪೋಪ್ ಆಗಿ ಆಯ್ಕೆಯಾಗಿದ್ದರು.