Karnataka SSLC Results 2025: ಮೇ 3ರಂದು ಕರ್ನಾಟಕ ಎಸ್‌ಎಸ್ಎಲ್ಸಿ ಫಲಿತಾಂಶ ಪ್ರಕಟ..!?: ಆನ್ಲೈನ್ನಲ್ಲಿ SSLC Result ನೋಡುವುದು ಹೇಗೆ?
ಸದ್ಯ ಪರೀಕ್ಷೆ ಬರೆದಿರುವ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.
ಮಾರ್ಚ್ 21 ರಿಂದ ಏಪ್ರಿಲ್ 4 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿದ್ದವು. ಈಗಾಗಲೇ ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗುತ್ತಿದೆ. ಕೆಲ ಸಣಪುಟ್ಟ ಕಾರ್ಯಗಳಿದ್ದು, ಕೂಡಲೇ ಮುಕ್ತಾಯಗೊಳಿಸಿ ಮೇ 3ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.
ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು. ಪರೀಕ್ಷೆಗೆ 8 ಲಕ್ಷದ 96 ಸಾವಿರ ವಿದ್ಯಾರ್ಥಿಗಳು ನೊಂದಯಿಸಿಕೊಂಡಿದ್ದರು. ಇನ್ನೂ ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ, ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು.
ಪರೀಕ್ಷಾ ದಿನದಂದು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ಆರ್ಟಿಸಿ, ಬಿಎಂಟಿಸಿ ಬಸ್ ಉಚಿತ ಸೇವೆ ಕೂಡ ಕಲ್ಪಿಸಲಾಗಿತ್ತು. ಇನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಕ್ಕಳ ಜೊತೆ ಮಾತನಾಡಿ, ಹೂ ಕೊಟ್ಟು ಆಲ್ ದಿ ಬೆಸ್ಟ್ ಹೇಳಿದ್ದರು. ಜೊತೆಗೆ ಪರೀಕ್ಷೆಗೆ ಕೈಗೊಂಡ ಕ್ರಮಗಳ ಬಗ್ಗೆ ಪರೀಶೀಲನೆ ಮಾಡಿದ್ದರು.
ಎಸ್ಎಸ್ಎಲ್ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವುದು ಹೇಗೆ?
- ಅಧಿಕೃತ ವೆಬ್ಸೈಟ್ಗಳಾದ https://karresults.nic.in/ ಮತ್ತುkseab.karnataka.gov.in ಭೇಟಿ ನೀಡಿ.
- ಮುಖಪುಟದಲ್ಲಿರುವ ‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
- SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮೀಟ್ ಮೇಲೆ ಕ್ಲಿಕ್ ಮಾಡಬೇಕು.
- ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.
- ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ಆಫ್ ಲೈನ್‌ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 56263 ಗೆ ಎಸ್ಎಂಎಸ್ ಕಳುಹಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.
ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.