Rain Alert : ವಾಯುಭಾರ ಕುಸಿತ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ : ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಜಿಲ್ಲೆಗಳು ಸೇರಿದಂತೆ 24 ಜಿಲ್ಲೆಗಳಿಗೆ `ಯೆಲ್ಲೋ ಅಲರ್ಟ್' ಘೋಷಣೆ.!


ಮಂಗಳೂರು : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ಇಂದು ಮತ್ತು ನಾಳೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ತುಮಕೂರು, ಮೈಸೂರು, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಒಣ ಹವೆ ಇರಲಿದ್ದು, ಕರಾವಳಿಯ ದಕ್ಷಿಣ ಕನ್ನಡ ಮತ್ತು ಉಡುಪಿ ಕಲ್ಲು ಜಿಲ್ಲೆಯ ಕೆಲವು ಕಡೆ ಗುಡಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡು ಮತ್ತು ಉತ್ತರಗಳ ನಾಡಿನ ಅನೇಕ ಜಿಲ್ಲೆಗಳಲ್ಲಿ ಗಂಟೆಗೆ 30 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಸಹಿತ ಮಳೆಯಾಗುವ ಸಂಭವ ಇದೆ. ಸೋಮವಾರ ಮತ್ತು ಮಂಗಳವಾರ 10ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
Next Post Previous Post

Announcement