ಮಂಗಳೂರು: ದಕ್ಷಿಣ ಕನ್ನಡ ಹಲವೆಡೆ ಮಳೆ; ಇಂದು, ನಾಳೆ ಎಲ್ಲೋ ಅಲರ್ಟ್‌

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಕಡೆಗಳಲ್ಲಿ ಮಂಗಳವಾರ ಮಳೆಯಾಗಿದೆ. ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ಪ್ರದೇಶಗಳಲ್ಲಿ ಸಂಜೆ ಬಳಿಕ ಗಾಳಿ ಸಹಿತ ಉತ್ತಮ ಮಳೆಯಾಗಿತ್ತು. ಜಿಲ್ಲೆಯಾದ್ಯಂತ ಬೆಳಗ್ಗೆಯಿಂದಲೇ ಮೋಡದಿಂದ ಕೂಡಿದ ವಾತಾವರಣ ಇತ್ತು.

ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ ಮುಂದಿನ ಎ.9 ಮತ್ತು 10 ರಂದು “ಎಲ್ಲೋ ಅಲರ್ಟ್‌’ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.


ಮಂಗಳವಾರ ಮಂಗಳೂರಿನಲ್ಲಿ 34.1 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ತಾಪಮಾನ ಹೆಚ್ಚು ಮತ್ತು 26.6 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.7 ಡಿ.ಸೆ. ತಾಪಮಾನ ಹೆಚ್ಚು ಇತ್ತು.
Next Post Previous Post

Announcement