ಇಂದು ಮಧ್ಯಾಹ್ನ 12:30ಕ್ಕೆ `SSLC' ಫಲಿತಾಂಶ ಪ್ರಕಟ : ಇಲ್ಲಿದೆ ರಿಸಲ್ಟ್ ಚೆಕ್ ಮಾಡುವ ಸುಲಭ ವಿಧಾನ | Karnataka SSLC Exam Results


ಮಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ಇಂದು ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ.

ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ.

ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ( Karnataka SSLC Exam-1 Results ) ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ SSLC ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ವಿದ್ಯಾರ್ಥಿಗಳು ತಮ್ಮ ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು https://karresults.nic.in ಜಾಲತಾಣಕ್ಕೆ ಭೇಟಿ ನೀಡಿ, ತಮ್ಮ ನೋಂದಣಿ ಸಂಖ್ಯೆ ಸೇರಿದಂತೆ ಇತರೆ ಮಾಹಿತಿಯನ್ನು ನಮೂದಿಸಿ ಪಡೆಯಬಹುದಾಗಿದೆ.

ಈ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ 02-05-2025ರ ಮಧ್ಯಾಹ್ನ 12-30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಮಾಹಿತಿ ನೀಡಿದ್ದಾರೆ.

SMS ಮೂಲಕ ಫಲಿತಾಂಶ ಪಡೆಯಲು

KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ. ಫಲಿತಾಂಶ ಅದೇ ಮೊಬೈಲ್‌ ಸಂಖ್ಯೆಗೆ ಕಳುಹಿಸಲಾಗುತ್ತದೆ.

 

 


Next Post Previous Post

Announcement