BREAKING: ಬೆಂಗಳೂರಿನಲ್ಲಿ ಒಂಟಿ ಮಹಿಳೆಯ ಬರ್ಬರ ಹತ್ಯೆಮಾಡಿ 1 ಕೋಟಿ ಮೌಲ್ಯದ ಚಿನ್ನಾಭರಣ ದರೋಡೆ!

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಒಂಟಿ ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.


ಬೆಂಗಳೂರಿನ ಕಾಟನ್ ಪೇಟೆ ದರ್ಗಾ ರಸ್ತೆಯಲ್ಲಿರುವ ಮನೆಯಲ್ಲಿ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ.


47 ವರ್ಷದ ಲತಾ ಮೃತ ಮಹಿಳೆ. ಹೋಲ್ ಸೇಲ್ ಬಟ್ಟೆ ವ್ಯಾಪಾರಿ ಪ್ರಕಾಶ್ ಎಂಬುವವರ ಪತ್ನಿ ಲತಾ.

ದುಷ್ಕರ್ಮಿ ಮನೆಗೆ ನುಗ್ಗಿ ಮಹಿಳೆಯನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಮಹಿಳೆಯನ್ನು ಹತ್ಯೆಗೈದು ಮನೆಯಲ್ಲಿದ್ದ ಹಣ, ಚಿನ್ನಾಭರಣಗಳನ್ನು ದೋಚಿ ದುಷ್ಕರ್ಮಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಕಾಟನ್ ಪೇಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.



ಹೋಲ್ಸೇಲ್ ಬಟ್ಟೆ ವ್ಯಾಪಾರಿ ಪ್ರಕಾಶ್ ಎನ್ನುವವರ ಪತ್ನಿ ಲತಾ ಅವರ ಕೊಲೆಯಾಗಿದೆ. ಲತಾ ಅವರನ್ನು ಕೊಲೆಗೈದು ದುಷ್ಕರ್ಮಿಗಳು 1 ಕೋಟಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಕಾಟನ್ ಪೇಟೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Next Post Previous Post

Select Your Language

Advertisement

Advertisement

Advertisement