BREAKING : ನಾಳೆ ಬೆಳಗ್ಗೆ 11:30 ಕ್ಕೆ 'SSLC ಪರೀಕ್ಷೆ ಫಲಿತಾಂಶ ಪ್ರಕಟ. ಆನ್ಲೈನ್ನಲ್ಲಿ SSLC Result ನೋಡುವುದು ಹೇಗೆ? Karnataka SSLC Results 2025:
ಮಧ್ಯಾಹ್ನ 12.30ರ ನಂತರ ವೆಬ್‌ಸೈಟ್‌ನಲ್ಲಿ SSLC ಫಲಿತಾಂಶ ಲಭ್ಯವಾಗಲಿದೆ. https://karresults.nic.in ಜಾಲತಾಣದಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಮಾರ್ಚ್, ಏಪ್ರಿಲ್ ತಿಂಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗಿದೆ. 8,96,447 ವಿದ್ಯಾರ್ಥಿಗಳು ಹಾಜರಾಗಿದ್ದರು. 15,881 ಶಾಲೆಗಳ ವಿದ್ಯಾರ್ಥಿಗಳು 2,818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ.
ಫಲಿತಾಂಶವನ್ನು ಆನ್ಲೈನ್ನಲ್ಲಿ ನೋಡುವುದು ಹೇಗೆ? ವೈಬ್ಸೈಟ್ ಯಾವುದು? ಕ್ರಮ ಹೇಗೆ? ಎಂಬೆಲ್ಲ ಮಾಹಿತಿ ಇಲ್ಲಿದೆ. ಕಳೆದ ವರ್ಷ, ಕೆಎಸ್‌ಇಎಬಿ ಮೇ 9 ರಂದು ಎಸ್‌ಎಸ್‌ಎಲ್ಸಿ ಪರೀಕ್ಷೆ-1 ಫಲಿತಾಂಶಗಳನ್ನು ಪ್ರಕಟಿಸಿತ್ತು.
ಆನ್ಲೈನ್ನಲ್ಲಿ ನೋಡುವುದು ಹೇಗೆ?
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) SSLC ಅಥವಾ 10 ನೇ ತರಗತಿಯ ಬೋರ್ಡ್ ಪರೀಕ್ಷಾ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ https://kseab.karnataka.gov.inಅಥವಾ https://karresults.nic.in ನಲ್ಲಿ ಪ್ರಕಟಿಸಲಿದೆ. ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸುವ ಮೂಲಕ ಫಲಿತಾಂಶ ಪಡೆಯಬಹುದಾಗಿದೆ.
- karresults.nic.in ನಲ್ಲಿ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ.
- 2025ರ ಎಸ್ಎಸ್ಎಲ್ಸಿ ಪರೀಕ್ಷೆ-1 ಫಲಿತಾಂಶ ಲಿಂಕ್ ಮೇಲೆ ಕ್ಲಿಕ್ ಮಾಡಿ.
- ನಂತರ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ 2025 ಲಾಗಿನ್ ಪೇಜ್ ತೆರೆದುಕೊಳ್ಳುತ್ತದೆ.
- ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ.
- ಬಳಿಕ, SSLC. Karnataka.gov.in ನಲ್ಲಿ ಆನ್ಲೈನ್ ಫಲಿತಾಂಶ ಅಂಕಪಟ್ಟಿಯ ಮುದ್ರಣವನ್ನು ತೆಗೆದುಕೊಳ್ಳಿ.
SMS ಮೂಲಕ ಪರಿಶೀಲಿಸುವುದು ಹೇಗೆ?
KAR 10 ಅಂತ ಬರೆದು ಸ್ಪೇಸ್ ಬಿಟ್ಟು ನೋಂದಣಿ ಸಂಖ್ಯೆ ಟೈಪ್ ಮಾಡಿ 56263ಗೆ ಸಂದೇಶ ಕಳುಹಿಸಿ.
ಫಲಿತಾಂಶವನ್ನು ವಿದ್ಯಾರ್ಥಿಗಳು ಅದೇ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುತ್ತದೆ.
ಇನ್ನೂ ಎರಡು ಅವಕಾಶಗಳಿವೆ
ಈ ವರ್ಷ ಇನ್ನೂ ಎರಡು ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು (ಪರೀಕ್ಷೆ-2 ಮತ್ತು ಪರೀಕ್ಷೆ-3) ನಡೆಯಲಿವೆ. ಉತ್ತೀರ್ಣರಾಗದಿದ್ದರೆ ಅಥವಾ ಉತ್ತಮ ಅಂಕ ಲಭಿಸದಿದ್ದರೆ ವಿದ್ಯಾರ್ಥಿಗಳಿಗೆ ಇನ್ನೂ ಎರಡು ಅವಕಾಶಗಳಿವೆ. ಈ ಪರೀಕ್ಷೆಗಳು ಜೂನ್ ಮತ್ತು ಜುಲೈನಲ್ಲಿ ನಡೆಯುವ ಸಾಧ್ಯತೆ ಇದೆ.