Breaking News: ಕರ್ನಾಟಕದಲ್ಲಿ ಮತ್ತೆ ಕೊರೋನಾ: 9 ತಿಂಗಳ ಮಗು ಸೇರಿದಂತೆ 35 ಪ್ರಕರಣ ಧೃಡ ಮಕ್ಕಳು, ಗರ್ಭಿಣಿಯರು, ವೃದ್ಧರು ಎಚ್ಚರಿಕೆ ವಹಿಸಲು ಸೂಚನೆ!


ಬೆಂಗಳೂರು: ಸಿಂಗಾಪುರ, ಹಾಂಕಾಂಗ್‌ನಲ್ಲಿ ತಲ್ಲಣ ಮೂಡಿಸಿರುವ ಕೋವಿಡ್‌ನ‌ ಹೊಸ ತಳಿ ಕರ್ನಾಟಕಕ್ಕೂ ಕಾಲಿಟ್ಟಿದೆ. ರಾಜ್ಯದಲ್ಲಿ 35 ಕೊರೊನಾ ಪ್ರಕರಣಗಳು ಕಂಡು ಬಂದಿದ್ದು, ಈ ಪೈಕಿ 32 ಪ್ರಕರಣಗಳು ಬೆಂಗಳೂರು ನಗರದಲ್ಲೇ ಪತ್ತೆಯಾಗಿದೆ. ಆದರೆ ಇದು ಆತಂಕ ಪಡುವ ಸಂಗತಿ ಅಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ತಿಳಿಸಿದ್ದಾರೆ.


ವೈದ್ಯರ ಪ್ರಕಾರ, ಇದು ಕೊರೊನಾ ಋತು ಆಗಿದ್ದು, ಈ ತಿಂಗಳಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾ
ಗುವುದು ಸಹಜ. ಈ ಹಂತದಲ್ಲಿ ಯಾವುದೇ ಆತಂಕಪಡುವ ಅಗತ್ಯವಿಲ್ಲ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರು ಜನ ಸಂದಣಿ ಪ್ರದೇಶ ಗಳಲ್ಲಿ ಹೋಗುವ ವೇಳೆ ಮಾಸ್ಕ್ ಧರಿಸುವುದು ಸಹಿತ ಸೂಕ್ತ ಮುನ್ನೆಚ್ಚ ರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಲಹೆ ನೀಡಲಾಗಿದೆ. ಉಸಿರಾಟದ ಸಮಸ್ಯೆ ಯಿಂದ ಆಸ್ಪತ್ರೆಗೆ ದಾಖಲಾಗುವವರಿಗೆ ಕಡ್ಡಾಯವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಬೇಕು ಎಂದಿದ್ದಾರೆ.


9 ತಿಂಗಳ ಮಗುವಿಗೆ ಕೊರೊನಾ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ 9 ತಿಂಗಳ ಮಗುವಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಖಾಸಗಿ ಆಸ್ಪತ್ರೆಯಲ್ಲಿದ್ದ ಮಗುವನ್ನು ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಪರಿಸ್ಥಿತಿ ಹತೋಟಿಯಲ್ಲಿ
ಕಳೆದ 20 ದಿನಗಳ ಅವಧಿಯಲ್ಲಿ, ಕರ್ನಾಟಕದಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆಯಲ್ಲಿ ಕೊಂಚ ಏರಿಕೆಯನ್ನು ಗಮನಿಸಲಾಗಿದೆ. ಈ ವರ್ಷ ಇದುವರೆಗೆ ಯಾವುದೇ ಕೊರೊನಾ ಮರಣಗಳು ವರದಿಯಾಗಿರುವುದಿಲ್ಲ. ಪ್ರಸ್ತುತ ಕೊರೊನಾ ಪರಿಸ್ಥಿತಿ ಹತೋಟಿಯಲ್ಲಿದ್ದು ಸಾರ್ವಜನಿಕರು ಅನಗತ್ಯ ಭಯಪಡುವ ಅಗತ್ಯವಿಲ್ಲ, ಆದರೆ ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ. ವಿಶೇಷವಾಗಿ ಗರ್ಭಿಣಿಯರು, ಮಕ್ಕಳು, ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಮುಂಜಾಗ್ರತಾ ಕ್ರಮವಾಗಿ ಜನನಿಬಿಡ ಪ್ರದೇಶಗಳಿಗೆ ತೆರಳುವಾಗ ಮಾಸ್ಕ್ ಧರಿಸುವುದು ಸೂಕ್ತ. ಕೋವಿಡ್‌ ಮುಂಜಾಗ್ರತೆಗಾಗಿ ಸೂಕ್ತ ಕ್ರಮಗಳಾದ ಕೈಗಳ ಸ್ವತ್ಛತೆ, ಹ್ಯಾಂಡ್‌ ಸ್ಯಾನಿಟೈಸರ್‌ ಬಳಕೆ, ಇತ್ಯಾದಿಗಳನ್ನು ಪಾಲಿಸುವುದು ಅಗತ್ಯ. ಸಾರಿSevere Acute Respiratory Illness) ಲಕ್ಷಣಗಳನ್ನು ಹೊಂದಿರುವವರು, ಆದ್ಯತೆಯ ಮೇಲೆ ಕೋವಿಡ್‌ – 19 ಪರೀಕ್ಷೆಗೆ ಒಳಪಡುವುದರಿಂದ ಸೂಕ್ತ ಚಿಕಿತ್ಸೆ ಪಡೆಯುವುದರೊಂದಿಗೆ ಕೋವಿಡ್‌ ಪ್ರಸರಣವನ್ನು ನಿಯಂತ್ರಿಸಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

Next Post Previous Post

Advertisement

Advertisement

. Advertisement