BREAKING: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ; ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆ!? : ದ.ಕ, ಉಡುಪಿ ಸಹಿತ ಆರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ


ಮಂಗಳೂರು : ಗಳೂರು;ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಧಾರಾಕಾರ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ತಿಳಿಸಿದಂತೆ, ಮುಂದಿನ ಕೆಲ ದಿನಗಳ ಕಾಲ ಈ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆ ಇದೆ. ಮೇ 25ರಿಂದ 28ರವರೆಗೆ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡಿನ ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಿಗೂ ಇದೇ ಅವಧಿಗೆ ರೆಡ್‌ ಅಲರ್ಟ್‌ ಜಾರಿಯಲ್ಲಿದೆ.ಮೇ 25ರಂದು ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಹಾಗೂ ಗದಗ, ಹಾವೇರಿ, ಚಾಮರಾಜನಗರ, ಹಾಸನ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ನೀಡಲಾಗಿದೆ. ಮೇ 26ರಂದು ಹಾಸನ, ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌, ಬೀದರ್‌, ಗದಗ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಜಾರಿಯಲ್ಲಿದೆ. ಮೇ 27 ಮತ್ತು 28ರಂದು ಕೆಲ ಜಿಲ್ಲೆಗಳಿಗೆ ಆರೆಂಜ್‌ ಹಾಗೂ ಯೆಲ್ಲೋ ಅಲರ್ಟ್‌ ನೀಡಲಾಗಿದೆ.

ಮೇ 29 ಮತ್ತು 30ರಂದು ಕರಾವಳಿಯ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಶನಿವಾರ ಹಲವೆಡೆ ಉತ್ತಮ ಮಳೆಯಾಗಿದ್ದು, ಉತ್ತರ ಕನ್ನಡದ ಕ್ಯಾಸಲ್‌ರಾಕ್‌ ಮತ್ತು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲಿ ತಲಾ 16 ಸೆಂ.ಮೀ., ಕೊಡಗಿನ ಭಾಗಮಂಡಲದಲ್ಲಿ 10 ಸೆಂ.ಮೀ., ದ. ಕನ್ನಡದ ಬೆಳ್ತಂಗಡಿ, ಮಂಕಿ, ಗೇರುಸೊಪ್ಪ ಮತ್ತು ಮಂಗಳೂರುಗಳಲ್ಲಿ ತಲಾ 8 ಸೆಂ.ಮೀ., ಕುಂದಾಪುರ, ಗೋಕರ್ಣ, ಅಂಕೋಲಾ ಮತ್ತು ಚಿಕ್ಕಮಗಳೂರಿನ ಕಳಸದಲ್ಲಿ ತಲಾ 7 ಸೆಂ.ಮೀ. ಮಳೆಯಾಗಿದೆ.ಐಎಂಡಿ(IMD) ಪ್ರಕಾರ, ಮುಂದಿನ ನಾಲ್ಕು ದಿನಗಳಲ್ಲಿ ಈ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡ ಮುಸುಕಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ವರದಿಯಾಗಿದೆ. ರಾಜ್ಯದ ಕರಾವಳಿ, ಮಲೆನಾಡು ಮತ್ತು ಉತ್ತರ ಭಾಗಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ಹವಾಮಾನ ಇಲಾಖೆ ಪ್ರಕಾರ, ಮುಂದಿನ ಐದು ದಿನಗಳಲ್ಲಿ ರಾಜ್ಯದಾದ್ಯಂತ ಗರಿಷ್ಠ ತಾಪಮಾನ 2-3°C ರಷ್ಟು ಕುಸಿಯಬಹುದಾಗಿದೆ. ಮೇ 29ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.


ಎಲ್ಲೆಲ್ಲಿ ಮಳೆಯಾಗಿದೆ?
ಕ್ಯಾಸಲ್​ರಾಕ್,ಕೊಟ್ಟಿಗೆಹಾರ, ಭಾಗಮಂಡಲ, ಬೆಳ್ತಂಗಡಿ, ಮಂಕಿ, ಮಂಗಳೂರು, ಗೇರುಸೊಪ್ಪ, ಕುಂದಾಪುರ, ಮಾಣಿ, ಕುಮಟಾ, ಧರ್ಮಸ್ಥಳ, ಗೋಕರ್ಣ, ಕುಮಟಾ, ಕಳಸ, ಲೋಂಡಾ, ಶೃಂಗೇರಿ, ಯಲ್ಲಾಪುರ, ಹೊನ್ನಾವರ, ಸಿದ್ದಾಪುರ, ಪುತ್ತೂರು, ಮುಲ್ಕಿ, ಮಂಗಳೂರು, ಕಾರವಾರ, ಔರಾದ್, ಖಾನಾಪುರ, ಕೋಟಾ, ಉಪ್ಪಿನಂಗಡಿಯಲ್ಲಿ ಮಳೆಯಾಗಿದೆ.

ಕಮ್ಮರಡಿ, ತ್ಯಾಗರ್ತಿ, ಹಳಿಯಾಳ, ಆಗುಂಬೆ, ಕೊಪ್ಪ, ಚಿಕ್ಕಮಗಳೂರು, ಪೊನ್ನಂಪೇಟೆ, ಬೈಲಹೊಂಗಲ, ಬನವಾಸಿ, ಮಂಥಾಳ, ದೇವರಹಿಪ್ಪರಗಿ, ಧಾರವಾಡ, ಬಂಡೀಪುರ, ಬಸವನಬಾಗೇವಾಡಿ, ಎನ್​ಆರ್​ಪುರ, ಸರಗೂರು, ಹೊನ್ನಾಳಿ, ಕುಶಾಲನಗರದಲ್ಲಿ ಮಳೆಯಾಗಿದೆ.

ರಾಯಚೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ.ಎಚ್​ಎಎಲ್​ನಲ್ಲಿ 28.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 28.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ30.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 28.8ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 29.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ವಿಜಯಪುರದಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 30.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 25.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 28.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ,ಕೊಪ್ಪಳದಲ್ಲಿ 31.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಹೀಗಾಗಿ ಕರ್ನಾಟಕ, ಗೋವಾ, ಕೇರಳ ಹಾಗೂ ತಮಿಳುನಾಡು ಕರಾವಳಿಗೆ ಮುಂಗಾರು ಏಕಕಾಲಕ್ಕೆ ಪ್ರವೇಶಿಸಿದೆ. ಮುಂದಿನ ನಾಲ್ಕೈದು ದಿನ ರಾಜ್ಯದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

Next Post Previous Post

Advertisement

Advertisement

. Advertisement