BREAKING: ಮಂಗಳೂರು| ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಆರೋಪಿ ರೌಡಿ ಶೀಟರ್ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮೇಲೆ ತಲವಾರು ದಾಳಿ ಮಾಡಿ ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಮಂಗಳೂರಿನ ಸುರತ್ಕಲ್ ನ ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಸುಹಾಸ್ ಶೆಟ್ಟಿ ಮೇಲೆ ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಮಂಗಳೂರು ಹೊರವಲಯದ ಬಜಪೆ ಕಿನ್ನಿಪದವು ಬಳಿ ನಡೆದ ಘಟನೆ ನಡೆದಿದೆ.
2022ರ ಜುಲೈ 28ರಂದು ನಡೆದಿದ್ದ ಸುರತ್ಕಲ್ ನ ಫಾಜಿಲ್ ಹತ್ಯೆ ಮಾಡಲಾಗಿತ್ತು. ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದಿದ್ದ ಫಾಜಿಲ್ ಹತ್ಯೆ ಮಾಡಿದ್ದರು.
ಫಾಜಿಲ್ ಹತ್ಯೆ ಕೇಸ್ ನಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು. ಸುಹಾಸ್ ಶೆಟ್ಟಿ ಈ ಹಿಂದೆ ಬಜರಂಗದಳದ ಗೋರಕ್ಷಾ ವಿಭಾಗದ ಸದಸ್ಯನಾಗಿದ್ದನು. ಹತ್ಯೆ ಪ್ರಕರಣದಲ್ಲಿ ಭಾಗಿಯಾದ ನಂತರ ಯಾವುದೇ ಜವಾಬ್ದಾರಿ ಇರಲಿಲ್ಲ. ಹಲವು ಕೊಲೆ, ಕೊಲೆಯತ್ನ ಪ್ರಕರಣದ ಆರೋಪಿಯಾಗಿದ್ದನು.ಗಂಭೀರ ಸ್ಥಿತಿಯಲ್ಲಿರುವ ಸುಹಾಸ್‌ನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲು ಮುಂದಾಗಿತ್ತು. ಆದರೆ, ತಲವಾರು ದಾಳಿಗೆ ತುತ್ತಾಗಿದ್ದ ಸುಹಾಸ್ ಶೆಟ್ಟಿ ತೀವ್ರ ರಕ್ತಸ್ರಾವ ಉಂಟಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಸಾವಿಗೀಡಾಗಿದ್ದಾರೆ.
ಮಂಗಳೂರಿನಲ್ಲಿ ರೌಡಿ ಶೀಟರ್, ಮಂಗಳೂರಿನ ಎ.ಜೆ ಆಸ್ಪತ್ರೆ ಎದುರು ಹಿಂದೂ ಕಾರ್ಯಕರ್ತರು ಸೇರಿದ್ದಾರೆ. ಆಸ್ಪತ್ರೆಗೆ ಬಿಜೆಪಿ ಮತ್ತು ಹಿಂದೂ ಸಂಘಟನೆ ನಾಯಕರ ಆಗಮಿಸಿದ್ದಾರೆ. ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆ ಎದುರು ಬಿಗು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಆಸ್ಪತ್ರೆಗೆ ಆಗಮಿಸಿದ ನಳಿನ್ ಕಟೀಲು, ಶಾಸಕ ಭರತ್ ಶೆಟ್ಟಿ ಕೂಡ ಆಗಮಿಸಿದ್ದಾರೆ. ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.