BREAKING | ಬಂಟ್ವಾಳ: ಯುವಕನಿಗೆ ತಂಡದಿಂದ ಚೂರಿ ಇರಿತ
ಮಂಗಳೂರು : ಯುವಕನಿಗೆ ನಾಲ್ಕು ಮಂದಿಯ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಪಾಣೆಮಂಗಳೂರು ಸಮೀಪದ ಅಕ್ಕರಂಗಡಿ ಬಸ್ಸು ನಿಲ್ದಾಣ ಬಳಿ ಶುಕ್ರವಾರ ರಾತ್ರಿ ಸಂಭವಿಸಿದೆ.
ಚೂರಿ ಇರಿತಕ್ಕೊಳಗಾದ ಯುವಕನನ್ನು ಇಲ್ಲಿನ ನಿವಾಸಿ, ಪೈಂಟರ್ ವೃತ್ತಿಯ ಹಮೀದ್ ಯಾನೆ ಅಮ್ಮಿ ಎಂದು ತಿಳಿದುಬಂದಿದೆ.ಇರಿತದಿಂದ ಹಮೀದ್ ಅವರ ಕೈಗೆ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯರು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಘಟನಾ ಸ್ಥಳಕ್ಕೆ ಬಂಟ್ವಾಳ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಘಟನೆಗೆ ಕಾರಣ ಏನು ಎಂಬುದು ತಿಳಿದು ಬಂದಿಲ್ಲ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.