BREAKING : ರಾಮನಗರ ಜಿಲ್ಲೆಗೆ 'ಬೆಂಗಳೂರು ದಕ್ಷಿಣ' ಎಂದು ಮರು ನಾಮಕರಣ : ಡಿಸಿಎಂ ಡಿಕೆ ಶಿವಕುಮಾರ್ ಘೋಷಣೆ
ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರುನಾಮಕರಣ ಮಾಡಲು ಕರ್ನಾಟಕ ಸಚಿವ ಸಂಪುಟ ಮತ್ತೊಮ್ಮೆ ಅನುಮೋದನೆ ನೀಡಿದೆ. ರಾಮನಗರದ ಜನರ ಬೇಡಿಕೆಗಳನ್ನು ಪರಿಗಣಿಸಿ ಈ ನಿರ್ಧಾರ ಕೈಗೊಂಡಿರುವುದಾಗಿ ಸರ್ಕಾರ ತಿಳಿಸಿದೆ.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್‌ಕೆ ಪಾಟೀಲ್, ಜನರ ಆಶಯದಂತೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ಮರುನಾಮಕರಣ ಮಾಡಲು ಸಂಪುಟ ಅನುಮೋದನೆ ನೀಡಿದೆ.
ಬ್ರಾಂಡ್ ಬೆಂಗಳೂರನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಹೆಸರು ಬದಲಾವಣೆಗೆ ಕಂದಾಯ ಇಲಾಖೆ ಶೀಘ್ರವೇ ಸೂಚನೆ ನೀಡಲಿದ್ದು, ಜಿಲ್ಲೆಯ ಹೆಸರಿಗೆ ಸಂಬಂಧಪಟ್ಟಂತೆ ತಾಲೂಕುಗಳಲ್ಲಿ ಯಾವುದೇ ಬದಲಾವಣೆ ಮಾಡುವುದಿಲ್ಲ. ರಾಮನಗರ ಜಿಲ್ಲೆಯು ಪ್ರಸ್ತುತ ರಾಮನಗರ, ಮಾಗಡಿ, ಕನಕಪುರ, ಚನ್ನಪಟ್ಟಣ ಮತ್ತು ಹಾರೋಹಳ್ಳಿ ತಾಲೂಕುಗಳನ್ನು ಹೊಂದಿದ್ದು, ಅದು ಈಗ ಬೆಂಗಳೂರು ದಕ್ಷಿಣ ಜಿಲ್ಲೆಯ ಭಾಗವಾಗಲಿದೆ ಎಂದು ಪಾಟೀಲ್ ಸ್ಪಷ್ಟಪಡಿಸಿದರು.