BREAKING : ರಾಜ್ಯದಲಿ ಕೊರೋನಾ ಪ್ರಕರಣ ಹೆಚ್ಚಳ : ಶಾಲಾ ಮಕ್ಕಳ ಕುರಿತು ಇಂದು ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ!
ಮಕ್ಕಳ ಸುರಕ್ಷತೆ ಮತ್ತು ಆರೋಗ್ಯದ ಹಿತ ದೃಷ್ಟಿಯಿಂದ ಆರೋಗ್ಯ ಇಲಾಖೆ ಇಂದು ಸಂಜೆ ಗೈಡ್ಲೈನ್ಸ್ ಬಿಡುಗಡೆ ಮಾಡುವ ಸಾಧ್ಯತೆ ಇದೆ.
ಆರೋಗ್ಯ ಇಲಾಖೆ ಪ್ರಕಟಿಸುವ ಮಾರ್ಗಸೂಚಿಯಲ್ಲಿ ಪ್ರಮುಖವಾಗಿ, ಮಾಸ್ಕ್ ಧರಿಸಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಸೂಚನೆ ನೀಡಲಾಗುತ್ತದೆ. ಶಿಕ್ಷಕರು ಹಾಗೂ ಸಿಬ್ಬಂದಿಗಳು ಮಾಸ್ಕ್ ಧರಿಸುವಂತೆ ಸೂಚನೆ ನೀಡಲಾಗುತ್ತದೆ. ಮಕ್ಕಳಲ್ಲಿ ನೆಗಡಿ, ಕೆಮ್ಮು, ಜ್ವರ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಮಾಹಿತಿ ನೀಡಬೇಕು. ಜ್ವರದ ಲಕ್ಷಣ ಕಂಡು ಬಂದರೆ ಮಕ್ಕಳಿಗೆ ರಜೆ ನೀಡುವ ಸಾಧ್ಯತೆಗಳು ಇವೆ ಎನ್ನಲಾಗುತ್ತಿದೆ.
ಹಾಗಾಗಿ ಇಂದು ಶಾಲಾ ಮಕ್ಕಳಿಗೆ ಮಾರ್ಗಸೂಚಿ ಪ್ರಕಟಿಸುವ ಸಾಧ್ಯತೆ ಇದೆ. ಮಾಸ್ಕ ಧರಿಸಿ ಮಕ್ಕಳನ್ನು ಶಾಲೆಗೆ ಕಳಿಸುವಂತೆ ಗೈಡ್ ಲೈನ್ಸ್ ನಲ್ಲಿ ಸೂಚನೆ ನೀಡಲಾಗುತ್ತದೆ. ಅಲ್ಲದೇ ಅನಾರೋಗ್ಯದ ಲಕ್ಷಣ ಇದ್ದರೆ ಮಕ್ಕಳನ್ನು ಶಾಲೆಗೆ ಕಳುಹಿಸುವಂತಿಲ್ಲ. ಮಕ್ಕಳಿಗೆ ಆಗಾಗ ಕೈ ತೊಡೆಯುವಂತೆ ಸಲಹೆ ನೀಡಬೇಕು ರೋಗ ಲಕ್ಷಣ ಕಂಡು ಬಂದರೆ ವೈದ್ಯರನ್ನು ತಕ್ಷಣ ಸಂಪರ್ಕಿಸಬೇಕು ಅನಾರೋಗ್ಯ ಕಂಡುಬಂದರೆ ಮಕ್ಕಳನ್ನು ಶಾಲೆಗೆ ಕಳುಹಿಸುವಂತಿಲ್ಲ.