Heavy Rain: ರಾಜ್ಯದಲ್ಲಿ ಮುಂದುವರೆದ ಮಳೆಯ ಆರ್ಭಟ, ದಕ್ಷಿಣಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ಮೇ. 30ರ ವರೆಗೆ ರೆಡ್ ಅಲರ್ಟ್
ಮಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆಯ ಅಬ್ಬರ ಇನ್ನೂ ಕಡಿಮೆಯಾದಂತಿಲ್ಲ. ಮೇ 30ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರಿ ಮಳೆಯಾಗುವ ಸಾಧ್ಯತೆಗಳಿರುವ ಹಿನ್ನೆಲೆಯಲ್ಲಿ ಮೇ 28 ರಿಂದ 30ರ ವರೆಗೆ ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇನ್ನು ಬೆಳಗಾವಿ, ಧಾರವಾಡ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಬೀದರ್, ಕಲಬುರಗಿ, ಯಾದಗಿರಿ, ದಾವಣಗೆರೆ, ಮೈಸೂರು, ಚಾಮರಾಜನಗರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.