Puttur | ಕಲ್ಲರ್ಪೆ: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಪಲ್ಟಿಯಾದ ರಿಕ್ಷಾ!

ಪುತ್ತೂರು: ನಿತ್ಯ ಅಪಘಾತದಿಂದಲೇ ಸುದ್ದಿಯಾಗುತ್ತಿರುವ ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ಮಂಗಳವಾರ ರಾತ್ರಿ 10.30ರ ಸುಮಾರಿಗೆ ಮತ್ತೊಂದು ಅಪಘಾತ ಸಂಭವಿಸಿದೆ.

ಪರ್ಪುಂಜ ಭಾಗದಿಂದ ಆಗಮಿಸಿದ ರಿಕ್ಷಾವೊಂದು ಚಾಲಕನ ನಿಯಂತ್ರಣ ತಪ್ಪಿ, ಪಲ್ಟಿಯಾಗಿದೆ.

ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ರಸ್ತೆ ಬದಿಯ ಬಸ್ ಬೇಗೆ ಟಯರ್ ಬಡಿದು ಪಲ್ಟಿಯಾದ ರಿಕ್ಷಾ, ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬಕ್ಕೆ ಅಪ್ಪಳಿಸಿ ಉರುಳಿ ಬಿದ್ದಿದೆ. ವಿದ್ಯುತ್ ತಂತಿಗಳು ಪರಸ್ಪರ ಸ್ಪರ್ಶಿಸಿ ಬೆಂಕಿಯ ಕಿಡಿ ಕಾಣಿಸಿಕೊಂಡಿದೆ. ವಿದ್ಯುತ್ ಕಂಬ ಸ್ವಲ್ಪ ವಾಲಿದೆ.
Next Post Previous Post

Advertisement

Advertisement

. Advertisement