ಶಿರಾಡಿ ಘಾಟ್ ನ ಎರಡು ಕಡೆ ಭೂಕುಸಿತ: ವಾಹನ ಸಂಚಾರಕ್ಕೆ ಅಡ್ಡಿ Shiradi Ghat Road
ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ (Shiradi Ghat Road) ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು ಟು ಮಂಗಳೂರು ರಸ್ತೆಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಹಾಸನ: ರಾಜ್ಯದಲ್ಲಿ ಈ ತಿಂಗಳು ಪೂರ್ವ ಮುಂಗಾರು ಮಳೆ ಧಾರಾಕಾರವಾಗಿ ಸುರಿದಿದೆ. ನೈರುತ್ಯ ಮಾನ್ಸೂನ್ ಮಾರುತಗಳು ರಾಜ್ಯವನ್ನು ಪ್ರವೇಶಿಸಿವೆ. ನಿರಂತರ ಬಿರುಗಾಳಿ ಮಳೆಯಿಂದ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟ್ ರಸ್ತೆಯಲ್ಲಿ (Shiradi Ghat Road) ಎರಡು ಕಡೆ ಭೂ ಕುಸಿತ ಉಂಟಾಗಿದೆ. ಬೆಂಗಳೂರು ಟು ಮಂಗಳೂರು ರಸ್ತೆಯಲ್ಲಿ ಮಣ್ಣು ಕುಸಿದು ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಪರಿಣಾಮ ಸಕಲೇಶಪುರ ತಾಲೂಕಿನ ದೋಣಿಗಾಲ್ ಮತ್ತು ಅಡ್ಡನಗುಡ್ಡದ ಬಳಿ ಶಿರಾಡಿ ಘಾಟ್ ರಸ್ತೆಯಲ್ಲಿ ಎರಡು ಕಡೆ ಭೂ ಕುಸಿತ ಉಂಟಾಗಿದೆ. ತಡೆಗೋಡೆ ನಿರ್ಮಿಸಿದ್ದರೂ ಕೂಡ ರಸ್ತೆ ಮೇಲೆ ಮಣ್ಣು ಕುಸಿದಿದ್ದು, ಮಣ್ಣಿನ ಸಮೇತ ಮರಗಳು ನೆಲಕ್ಕೆ ಉರುಳುತ್ತಿವೆ.
ವೀಕೆಂಡ್ ಹಿನ್ನೆಲೆ ಶಿರಾಡಿಘಾಟ್ ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಳವಾಗಿದ್ದು, ವಾಹನ ಸವಾರರು ಎಚ್ಚರಿಕೆಯಿಂದ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.