ಭಾರಿ ಮಳೆ: ನಾಳೆ (ಜೂ 16) ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ನಾಳೆ (ಜೂ 16) ಜಿಲ್ಲೆಯ ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ – ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ

ಉಡುಪಿ ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ಉಡುಪಿ ಜಿಲ್ಲೆಯ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ನಾಳೆ ದಿನಾಂಕ 16-6-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ.ಕೆ ರವರು ಆದೇಶಿಸಿದ್ದಾರೆ.


ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.


1. ಉಡುಪಿ ಜಿಲ್ಲೆಯ  ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.

2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.

3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.

4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನ ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.

5. ಜಿಲ್ಲಾಡಳಿತದಿಂದ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಗಳಲ್ಲಿ ನೇಮಿಸಲಾಗಿರುವ Incident Commander ಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.

ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.

7. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.

+ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.




Next Post Previous Post
ಜಾಹೀರಾತು

Advertisement

Advertisement

ಜಾಹೀರಾತು ```
```

Advertisement

Advertisement