ಭಾರಿ ಮಳೆ: ಇಂದು (ಜೂ 16) ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ | ಪರಿಷ್ಕೃತ ಆದೇಶ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹೆಚ್ಚಿನ ಮಳೆ ಆಗುತ್ತಿರುವ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ ) ಇಂದು ದಿನಾಂಕ 16-6-2025 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ರವರು ಪರಿಷ್ಕೃತ ಆದೇಶದಲ್ಲಿ ತಿಳಿಸಿರುತ್ತಾರೆ.
ಇದರ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 16 (ಇಂದು) ಸೋಮವಾರ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪಿಯು ತರಗತಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ. ಭಾನುವಾರ ರಾತ್ರಿ ಜಿಲ್ಲೆಯ ಐದು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಿ ಆದೇಶ ಹೊರಡಿಸಿದ್ದರು. ಆದರೆ ಇದೀಗ ಮಳೆ ವ್ಯಾಪಕವಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಆದೇಶ ಪರಿಷ್ಕರಿಸಿದ್ದು ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ ಘೋಷಣೆ ಮಾಡಿದ್ದಾರೆ. ಉಳಿದಂತೆ ಜಿಲ್ಲೆಯಲ್ಲಿ ವಿವಿಧ ಮಳೆ ಸಂಬಂಧಿತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಾಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಈ ಕೆಳಗಿನಂತೆ ತುರ್ತು ಕ್ರಮಗಳನ್ನು ಕೈಗೊಂಡಿರುತ್ತದೆ.
1. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ & ಪ್ರೌಢ ಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ದಿನಾಂಕ: 16.06.2025ರಂದು ರಜೆಯನ್ನು ಘೋಷಿಸಲಾಗಿರುತ್ತದೆ.
2. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ ಸಮುದ್ರತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು.
3. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಈ ಮೂಲಕ ಸೂಚನೆ ನೀಡಿದೆ.
4. ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನ ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.
5. ಜಿಲ್ಲಾಡಳಿತದಿಂದ ಗ್ರಾಮ ಪಂಚಾಯತ್ ಮತ್ತು ವಾರ್ಡ್ ಗಳಲ್ಲಿ ನೇಮಿಸಲಾಗಿರುವ Incident Commander ಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು.
ಪ್ರವಾಸಿಗರು / ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ.
7. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು.
+ ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು.