ಮುಂದುವರಿದ ಮಳೆ : ನಾಳೆ (ಜೂ.17)ರಂದು ಉಡುಪಿ ಜಿಲ್ಲೆಯ ಶಾಲೆ, ಕಾಲೇಜುಗಳಿಗೆ ರಜೆ
ಉಡುಪಿ: ಭಾರೀ ಮಳೆ ಹಿನ್ನೆಲೆ ಉಡುಪಿ ಜಿಲ್ಲೆಯಾದ್ಯಂತ ಅಂಗನವಾಡಿ ಹಾಗೂ ಒಂದರಿಂದ ಹತ್ತನೇ ತರಗತಿವರೆಗೆ( ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆ), ಪದವಿ ಪೂರ್ವ ಕಾಲೇಜು ಹಾಗೂ ಐಟಿಐ ವಿದ್ಯಾರ್ಥಿಗಳಿಗೆ ಜೂ.17ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.