BREAKING NEWS: ಪುತ್ತೂರು: ಬಿಜೆಪಿ ಮುಖಂಡ ಅರುಣ್ ಪುತ್ತಿಲ ಗಡೀಪಾರಿಗೆ ನೋಟಿಸ್ | ಜೂ.6ರಂದು ವಿಚಾರಣೆಗೆ ಹಾಜರಾಗಲು ಸೂಚನೆ


ಮಂಗಳೂರು: ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಗಡೀಪಾರು ನೋಟಿಸ್ ನೀಡಲಾಗಿದೆ. ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ಗಡೀಪಾರು ನೋಟಿಸ್ ಜಾರಿ ಮಾಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡೀಪಾರುವ ಮಾಡುವ ಆದೇಶ ಹೊರಡಿಸುವ ಕುರಿತು ಜೂನ್ 6ರಂದು ವಿಚಾರಣೆಗೆ ಹಾಜರಾಗಲು ಪುತ್ತೂರು ಉಪವಿಭಾಗದ ದಂಡಾಧಿಕಾರಿಯಾದ ಸಹಾಯಕ ಆಯುಕ್ತರು ನೋಟಿಸ್ ಜಾರಿಗೊಳಿಸಿದ್ದಾರೆ.

ಕರ್ನಾಟಕ ಪೊಲೀಸು ಅಧಿನಿಯಮ, 1963 ಕಲಂ: 58 ರಡಿ ನೋಟೀಸ್ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಮಾಡಿ ನೋಟಿಸ್​​ನಲ್ಲಿ ಆದೇಶಿಸಲಾಗಿದೆ.



ಅರುಣ್ ಪುತ್ತಿಲ ಗಡೀಪಾರು ನೋಟಿಸ್​ನಲ್ಲೇನಿದೆ?



ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ಕೃಷ್ಣಯ್ಯ ಎಂಬವರ ಮಗ ಆರುಣ್ ಕುಮಾರ್ ಪುತ್ತಿಲ ಎಂಬಾತನ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ: 55 ರಂತೆ ದಕ್ಷಿಣ ಕನ್ನಡ ಜಿಲ್ಲೆಯಿಂದ ಕಲಬುರ್ಗಿ ಜಿಲ್ಲೆಯ ಶಹಬಾದ್ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡೀಪಾರು ಆದೇಶ ಹೊರಡಿಸುವ ಕುರಿತು ವಿಚಾರಣೆಯನ್ನು ದಿನಾಂಕ: 06-06-2025 ರಂದು ನಿಗದಿಪಡಿಸಲಾಗಿದೆ. ಸದ್ರಿ ವಿಚಾರಣೆಗೆ ತಪ್ಪದೇ ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಪುತ್ತೂರು ವಿಭಾಗದ ಸಹಾಯಕ ಆಯುಕ್ತರು ನೀಡಿರುವ ನೋಟಿಸ್​​​ನಲ್ಲಿ ಉಲ್ಲೇಖಿಸಲಾಗಿದೆ.

‘ಈ ಪ್ರಕರಣದಲ್ಲಿ ನೀವು (ಪುತ್ತಿಲ) ಸ್ವತಃ ಯಾ ನ್ಯಾಯವಾದಿಯವರ ಮೂಲಕ ವಿಚಾರಣೆಗೆ ಹಾಜರಾಗಿ ವಾದಿಸಬಹುದೆಂದು ಈ ಮೂಲಕ ನಿಮಗೆ ತಿಳಿಸಲಾಗಿದೆ. ತಪ್ಪಿದಲ್ಲಿ ಸದರಿ ಪ್ರಕರಣದಲ್ಲಿ ನಿಮಗೆ ಆಸಕ್ತಿ ಇಲ್ಲವೇಂದು ಭಾವಿಸಿ, ಲಭ್ಯವಿರುವ ಮಾಹಿತಿಯ ಆಧಾರದಲ್ಲಿ ಏಕಪಕ್ಷಿಯವಾಗಿ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಸಹ ನೋಟಿಸ್​​ನಲ್ಲಿ ಉಲ್ಲೇಖಿಸಲಾಗಿದೆ.


Next Post Previous Post

Ad 1
Ad 2
Ad 3

Advertisement

Advertisement

Advertisement