BREAKING NEWS: Mangaluru: ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣ NIA ತನಿಖೆಗೆ: ಕೇಂದ್ರ ಗೃಹ ಸಚಿವಾಲಯ ಆದೇಶ
ಮಂಗಳೂರು: ಬಜ್ಪೆ ಬಳಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಜ್ಯ ಗೃಹಸಚಿವಾಲಯ ರಾಷ್ಟೀಯ ತನಿಖಾ ದಳ ಕ್ಕೆ ವಹಿಸಿ ಆದೇಶ ಹೊರಡಿಸಿದೆ. ಎನ್ಐಎ ಪ್ರಕರಣದ ತನಿಖೆ ನಡೆಸಲಿದೆ.
ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ತನಿಖೆಯನ್ನು ರಾಷ್ಟೀಯ ತನಿಖಾ ದಳಕ್ಕೆ ವಹಿಸುವಂತೆ ರಾಜ್ಯ ಬಿಜೆಪಿ ನಿಯೋಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಮನವಿಯಲ್ಲಿ ಸಲ್ಲಿಕೆ ಮಾಡಿತ್ತು.
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಧಾನಸಭೆ ವಿಪಕ್ಷ ನಾಯಕ ಅಶೋಕ್, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು ರಾಜ್ಯಪಾಲರಿಗೆ ನಾಲ್ಕು ಪುಟಗಳ ಲಿಖಿತ ರೂಪದಲ್ಲಿ ಮನವಿ ಸಲ್ಲಿಸದ್ದರು.
ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದೆ ಎಂದು ANI ವರದಿ ಮಾಡಿದೆ.
ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೇ 1ರಂದು ರಾತ್ರಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಸಂಬಂಧ ಪೊಲೀಸರು ಒಟ್ಟು 12 ಆರೋಪಿಗಳನ್ನು ಬಂಧಿಸಿದ್ದಾರೆ.