BREAKING NEWS: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಮೃತದೇಹ ನೇತ್ರಾವತಿ ನದಿಯಲ್ಲಿ ಪತ್ತೆ


ಪುತ್ತೂರು: ಪಾಣೆಮಂಗಳೂರು ಹಳೆ ಸೇತುವೆಯ ಬಳಿ ಬೈಕ್‌, ಮೊಬೈಲ್, ಚಪ್ಪಲಿ ಹಾಗೂ ಅಂಗಿ ( ಬಿಟ್ಟು ನಾಪತ್ತೆಯಾಗಿದ್ದ ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ಅವರ ಮೃತದೇಹ ಪತ್ತೆಯಾಗಿದೆ. ಅವರು ಸುಳ್ಯ ಮಂಗಳ ಡ್ರೈವಿಂಗ್ ಸ್ಕೂಲ್ ನ ಮಾಲಕ

ಇಂದು ಬೆಳಿಗ್ಗೆ ಸುಮಾರು 11 ಗಂಟೆಗೆ ಪಾಣೆಮಂಗಳೂರು ಹಳೆ ಸೇತುವೆಯ ಕೆಳಭಾಗದಲ್ಲಿ ಬೈಕ್ ಅಂಗಿ ಮೊಬೈಲ್ ಮತ್ತು ಚಪ್ಪಲ್ಲಿ ಅನಾಥವಾಗಿ ಬಿದ್ದಿರುವುದನ್ನು ಗಮನಿಸಿ. ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದರು.



ರಮೇಶ್ ರೈ ಅವರು ಇತ್ತೀಚೆಗೆ ನಡೆದ ಪುತ್ತೂರು ನಗರಸಭೆಯ ಉಪಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಭ್ಯರ್ಥಿಯಾಗಿ ನೆಲ್ಲಿಕಟ್ಟೆ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದರು. 



ಮೃತರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಕುಟುಂಬವರ್ಗ ಹಾಗೂ ಬಂಧುಮಿತ್ರರನ್ನು ಅಗಲಿದ್ದಾರೆ.
Next Post Previous Post

Advertisement

```
Ad 1

Advertisement

Advertisement

Advertisement