CM SIDDARAMAIH : 'ಈ ದುರಂತ ಗೆಲುವಿನ ಸಂಭ್ರಮ ಅಳಿಸಿಹಾಕಿದೆ': ಗಾಯಾಳುಗಳನ್ನು ಭೇಟಿ ಮಾಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಭಾರೀ ಸಾವು-ನೋವು ಸಂಭವಿಸಿದೆ. ಸದ್ಯದ ಮಾಹಿತಿ ಪ್ರಕಾರ, 13 ಮಂದಿ ಜೀವ ಕಳೆದುಕೊಂಡಿದ್ದಾರೆ. 


ಘಟನೆಯಲ್ಲಿ ಗಾಯಗೊಂಡವರನ್ನು ಸಿಎಂ ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ನಗರದ ಬೌರಿಂಗ್‌ ಆಸ್ಪತ್ರೆಯಲ್ಲಿ ಕಾಲ್ತುಳಿತದಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರಿಗೆ ಸಿಎಂ ಸಾಂತ್ವನ ಹೇಳಿದ್ದಾರೆ.




ಅದಲ್ಲದೇ ಘಟನೆಯ ಕುರಿತು ಬೇಸರ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಮ್ಯಾಚ್‌ ಗೆದ್ದ ಸಂಭ್ರಮವನ್ನು ಈ ಕಾಲ್ತುಳಿತ ದುರಂತ ಅಳಿಸಿಹಾಖಕಿದೆ ಎಂದಿದ್ದಾರೆ

ಸಿಎಂ ಸಿದ್ದರಾಮಯ್ಯ ಟ್ವೀಟ್

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.
ಈ ದುರಂತದ ನೋವು ಗೆಲುವಿನ ಸಂಭ್ರಮವನ್ನೂ ಅಳಿಸಿಹಾಕಿದೆ.



ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಆದಷ್ಟು ಬೇಗ ಗುಣಮುಖರಾಗಲಿ ಎಂದು ಹಾರೈಸುತ್ತೇನೆ. ತಮ್ಮವರನ್ನು ಕಳೆದುಕೊಂಡ ದುಃಖತಪ್ತ ಕುಟುಂಬಗಳಿಗೆ ನನ್ನ ಸಂತಾಪಗಳು.

ಇಂತಹದ್ದೊಂದು ನೂಕುನುಗ್ಗಲು ನಡೆದು ಜನಸಂದಣಿಯನ್ನು ನಿಯಂತ್ರಣ ಮಾಡಲಾಗದೆ ಅಹಿತಕರ ಘಟನೆ ನಡೆಯಬಹುದೆಂಬ ನಿರೀಕ್ಷೆಯಿಂದಲೇ ತಂಡದ ವಿಜಯಯಾತ್ರೆಗೆ ಅವಕಾಶ ನೀಡದೆ ಮುಂಜಾಗ್ರತೆ ವಹಿಸಲಾಗಿತ್ತು.

ಹೀಗಿದ್ದರೂ ಕ್ರೀಡಾಂಗಣದ ಬಳಿ ಜನ ಕಿಕ್ಕಿರಿದು ಸಾಗರದಂತೆ ಸೇರಿದ್ದ ಕಾರಣ ನೂಕುನುಗ್ಗಲು ನಡೆದು ಕಾಲ್ತುಳಿತದಿಂದ ಈ ಅವಘಡ ಸಂಭವಿಸಿದೆ.

ಪ್ರೀತಿ - ಅಭಿಮಾನ ಈ ಎಲ್ಲಕ್ಕಿಂತ ಜೀವ ಮುಖ್ಯ ಎನ್ನುವುದನ್ನು ಅರ್ಥ ಮಾಡಿಕೊಂಡು, ಸುರಕ್ಷತೆಗೆ ಮೊದಲ ಆದ್ಯತೆ ನೀಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡುತ್ತೇನೆ.

Next Post Previous Post

Advertisement

```
Ad 1

Advertisement

Advertisement

Advertisement