ಕಡಬ: ಪೆಟ್ರೋಲ್ ಸುರಿದು ಅಣ್ಣನ ಹತ್ಯೆಗೆ ಯತ್ನಿಸಿದ ತಮ್ಮ | ಗಾಯಾಳು ಗಂಭೀರ ಸ್ಥಿತಿಯಲ್ಲಿದ್ದು, ಮಂಗಳೂರು ಆಸ್ಪತ್ರೆಗೆ ಸಾಗಿಸಲಾಗಿದೆ.

ಕಡಬ: ಗದಗ ಮೂಲದ ಅಣ್ಣ ತಮ್ಮಂದಿರು ಪುತ್ತೂರಿನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.ಜೂ.8 ರ ಮದ್ಯಾಹ್ನದ ಮಂಗಳೂರು- ಬೆಂಗಳೂರು ರೈಲು ಮಾರ್ಗ ದಲ್ಲಿ ಸಂಚರಿಸುವ ಪ್ಯಾಸೆಂಜರ್ ರೈಲಿನಲ್ಲಿ ಬಂದು ಬಜಕರೆ ರೈಲು ನಿಲ್ದಾಣದಲ್ಲಿ ಇಬ್ಬರು ಇಳಿದಿದ್ದರು.

ರೈಲು ಹೋದ ಬಳಿಕ ಸುಮಾರು 500_ಮೀ ಮುಂದಕ್ಕೆ ಕರೆದುಕೊಂಡು ಬಂದು ತಮ್ಮ ನಿಂಗಪ್ಪ ಎಂಬಾತ ಏಕಾಎಕಿ ತನ್ನ ಕೈಯಲ್ಲಿದ್ದ ಪೆಟ್ರೋಲನ್ನು ತಮ್ಮನ ಮೇಳೆ ಎರಚಿ ಬೆಂಕಿ ಹಚ್ಚಿರುವುದಾಗಿ ಹೇಳಲಾಗಿದೆ.

ಬೆಂಕಿಯಲ್ಲಿ ಹೊತ್ತಿ ಉರಿಯುತ್ತಿದ್ದ ಗಾಯಾಳು ಪಕ್ಕದಲ್ಲೇ ಇದ್ದ ಚರಂಡಿ ನೀರಿಗೆ ಜಿಗಿದ ಕಾರಣ ಬೆಂಕಿ ನಂದಿದೆ ಎನ್ನಲಾಗಿದೆ.ಭಾರೀ ಕಿರುಚಾಟ ಕೇಳಿ ಬಂದ ಹಿನ್ನಲೆ ಸ್ಥಳೀಯರು ಹೋಗಿ ಗಮನಿಸಿದಾಗ ಗಂಭೀರ ಸ್ಥಿತಿಯಲ್ಲಿ ಇರುವುದು ಕಂಡು ಬಂದಿದೆ.

ಕೂಡಲೇ ಗಾಯಾಳುವನ್ನು ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆಗಾಗಿ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಸಾಗಿಸಲಾಗಿದೆ

ಘಟನಾ ಸ್ಥಳಕ್ಕೆ ತೆರಳಿದ ಕಡಬ ಪೊಲೀಸರು ಬೆಂಕಿ ಹಚ್ಚಿರುವ ತಮ್ಮ ಲಿಂಗಪ್ಪ ಎಂಬಾತನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರೈಲೇ ಹಳಿಯಲ್ಲಿ ಈ ಘಟನೆ ನಡೆದಿರುವುದರಿಂದ ಪೊಲೀಸರು ರೈಲ್ವೇ ಇಲಾಖೆಗೆ ಹಸ್ತಾಂತರ ಮಾಡುವ ಸಾಧ್ಯತೆ ಇದೆ. ಈ ಘಟನೆಗೆ ನಿಖರ ಕಾರಣ ತನಿಖೆಯಿಂದ ತಿಳಿದು ಬರಲಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ
Next Post Previous Post
ಜಾಹೀರಾತು

Advertisement

Advertisement

ಜಾಹೀರಾತು ```
```

Advertisement

Advertisement