ದೆಹಲಿ: 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನಿಷೇಧ..!!


ನವದೆಹಲಿ: ಹಳೇ ವಾಹನಗಳ ಬಳಕೆಯಿಂದ ಅದರಲ್ಲೂ 10 ವರ್ಷ ಮೇಲ್ಪಟ್ಟ ಡೀಸೆಲ್ ವಾಹನ ಹಾಗೂ 15 ವರ್ಷ ಮೇಲ್ಪಟ್ಟ ಪೆಟ್ರೋಲ್ ವಾಹನ ಮಾಲಿನ್ಯ ಹೆಚ್ಚಿಸುತ್ತಿದೆ ಅನ್ನೋ ಕಾರಣಕ್ಕೆ ಸಂಪೂರ್ಣ ಬ್ಯಾನ್ ಮಾಡಲಾಗಿದೆ. ದೆಹಲಿ ಸರ್ಕಾರ ಈ ನಿಯವನ್ನು ಕಟ್ಟು ನಿಟ್ಟಾಗಿ  ಜಾರಿಗೊಳಿಸಿದೆ.

 ನಗರದಾದ್ಯಂತ 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಪೆಟ್ರೋಲ್ ನೀಡುವುದನ್ನು ಬಂಕ್‌ಗಳು ನಿಲ್ಲಿಸಲಿದೆ ಎಂದು ದೆಹಲಿ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ ಶನಿವಾರ ಪ್ರಕಟಿಸಿದ್ದಾರೆ.

ರಾಷ್ಟ್ರ ರಾಜಧಾನಿಯಲ್ಲಿ ವಾಯು ಮಾಲಿನ್ಯವನ್ನು ತಡೆಗಟ್ಟುವ ಕ್ರಮಗಳ ಬಗ್ಗೆ ಚರ್ಚಿಸಲು ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು. ಬಳಿಕ ಮಾತನಾಡಿದ ಅವರು, ವಾಹನಗಳ ಹೊರಸೂಸುವಿಕೆ ಮತ್ತು ಮಾಲಿನ್ಯವನ್ನು ತಡೆಯಲು ಸರ್ಕಾರವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ ಎಂದು ಸಿರ್ಸಾ ಹೇಳಿದ್ದಾರೆ.

ಹಳೆಯ ವಾಹನಗಳ ಮೇಲೆ ನಿರ್ಬಂಧ, ಕಡ್ಡಾಯ ಹೊಗೆ ವಿರೋಧಿ ಕ್ರಮಗಳು ಮತ್ತು ಸಾರ್ವಜನಿಕ ಸಾರಿಗೆಗೆಗಳನ್ನು ವಿದ್ಯುತ್ ಚಾಲಿತವಾಗಿ ಪರಿವರ್ತಿಸುವುದು ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಲಾಗಿದೆ.


15 ವರ್ಷಕ್ಕಿಂತ ಹಳೆಯ ವಾಹನಗಳನ್ನು ಗುರುತಿಸಲು ನಾವು ಪೆಟ್ರೋಲ್ ಪಂಪ್‌ಗಳಲ್ಲಿ ಗ್ಯಾಜೆಟ್‌ಗಳನ್ನು ಸ್ಥಾಪಿಸುತ್ತೇವೆ. 15 ವರ್ಷಕ್ಕಿಂತ ಹಳೆಯ ವಾಹನಗಳಿಗೆ ಇಂಧನ ನೀಡಲಾಗುವುದಿಲ್ಲ’ ಎಂದು ಸಭೆಯ ನಂತರ ಸಿರ್ಸಾ ಹೇಳಿದ್ದಾರೆ.

 | ವಾಯು ಮಾಲಿನ್ಯ ತಗ್ಗಿಸಲು ಟ್ರಕ್‌–ಮೌಂಟ್‌ ವಾಟರ್‌ ಸ್ಪ್ರಿಂಕ್ಲರ್‌ ಬಳಕೆ
ಈ ಬಗ್ಗೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯಕ್ಕೆ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಹಳೆಯ ವಾಹನಗಳಿಗೆ ಇಂಧನ ಪೂರೈಕೆಯನ್ನು ನಿರ್ಬಂಧಿಸುವುದರ ಜೊತೆಗೆ, ರಾಜಧಾನಿಯಲ್ಲಿರುವ ಎಲ್ಲಾ ಬಹುಮಹಡಿ ಕಟ್ಟಡಗಳು, ಹೋಟೆಲ್‌ಗಳು ಮತ್ತು ವಾಣಿಜ್ಯ ಸಂಕೀರ್ಣಗಳಲ್ಲಿ ವಾಯು ಮಾಲಿನ್ಯದ ಮಟ್ಟವನ್ನು ನಿಗ್ರಹಿಸಲು ಹೊಗೆ ನಿರೋಧಕಗಳನ್ನು ಅಳವಡಿಸಬೇಕು ಎಂದು ಸಿರ್ಸಾ ಹೇಳಿದ್ದಾರೆ.

ದೆಹಲಿಯಲ್ಲಿ ಕಟ್ಟು ನಿಟ್ಟಾಗಿ ನಿಯಮ ಜಾರಿ

ದೆಹಲಿಯಲ್ಲಿ ಇಂದಿನಿಂದ 10 ವರ್ಷ ಹಳೇ ಡೀಸೆಲ್ ವಾಹನ, 15 ವರ್ಷ ಹಳೇ ಪೆಟ್ರೋಲ್ ವಾಹನ ಸಂಪೂರ್ಣ ಬ್ಯಾನ್ ಮಾಡಲಾಗಿದೆ. ಹಳೇ ವಾಹನಗಳಿಗೆ ಇಂಧನ ನೀಡುವಂತಿಲ್ಲ. ಪೆಟ್ರೋಲ್ ಬಂಕ್‌ಗಳಲ್ಲಿ ಹಳೇ ವಾಹನಗಳಿಗೆ ಇಂಧನವಿಲ್ಲ. ಜುಲೈ 1 ರಿಂದ ಈ ನಿಯಮ ಜಾರಿಯಾಗಿದೆ. ಪೆಟ್ರೋಲ್ ಸ್ಟೇಶನ್‌ಗಳಲ್ಲಿ ಪೊಲೀಸ್ ನಿಯೋಜಿಸಲಾಗಿದೆ.

ದೆಹಲಿಯಲ್ಲಿ ಮಾಲಿನ್ಯ ನಿಯಂತ್ರಿಸಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲು ಸುಪ್ರೀಂ ಕೋರ್ಟ್ ಈಗಾಗಲೇ ಹಲವು ವಾರ್ನಿಂಗ್ ನೀಡಿದೆ. ಇದರ ಬೆನ್ನಲ್ಲೇ ಇದೀಗ ಸರ್ಕಾರ ಕೇಂದ್ರದ ಮಹತ್ವಾಕಾಂಕ್ಷಿ ನಿಯಮ ಹಾಗೂ ಯೋಜನೆಯಂತೆ ದೆಹಲಿ ಹಾಗೂ ರಾಜಧಾನಿ ವ್ಯಾಪ್ತಿಯಲ್ಲಿ ಈ ನಿಯಮ ಜಾರಿಗೆ ತಂದಿದೆ. ಈ ಮೂಲಕ ಮಾಲಿನ್ಯ ನಿಯಂತ್ರಿಸಲು ಮುಂದಾಗಿದೆ. ಹಳೇ ವಾಹನಗಳು ಹೆಚ್ಚಿನ ಹೊಗೆ ಉಗುಳುತ್ತದೆ. ಇದರಿಂದ ಮಾಲಿನ್ಯದ ಪ್ರಮಾಣ ಹೆಚ್ಚಾಗುತ್ತದೆ. ಹೊಸ ವಾಹನಗಳು ಬಿಎಸ್ 6 ಅಥವಾ ಅದಕ್ಕಿಂತ ಹಿಂದಿನ ಎಮಿಶನ್ ನಿಯಮಕ್ಕೆ ಒಳಪಟ್ಟಿದೆ. ಹೀಗಾಗಿ ಮಾಲಿನ್ಯದ ಪ್ರಮಾಣ ಕಡಿಮೆ ಮಾಡಲು ಸಾಧ್ಯ ಎಂದು ತಜ್ಞರು ಹೇಳಿದ್ದಾರೆ.


Next Post Previous Post
ಜಾಹೀರಾತು

Advertisement

Advertisement

```

Advertisement

Advertisement