ಭಾರಿ ಮಳೆ: ಸುಳ್ಯ ಮತ್ತು ಕಡಬ ತಾಲೂಕುಗಳಲ್ಲಿ ಜುಲೈ 3 ರಂದು ಎಲ್ಲಾ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಸುಳ್ಯ: ತಾಲ್ಲೂಕಿನಲ್ಲಿ ನಿರಂತರವಾಗಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುಳ್ಯ ತಾಲ್ಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು (ಸರ್ಕಾರಿ, ಅನುದಾನಿತ ಮತ್ತು ಖಾಸಗಿ)
ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 3, 2025 ರಂದು ರಜೆ ಘೋಷಿಸಲಾಗಿದೆ. ಈ ಕುರಿತು ಸುಳ್ಯ ತಾಲ್ಲೂಕು ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ.
ಕಡಬ ತಾಲ್ಲೂಕಿನಲ್ಲಿಯೂ ಭಾರೀ ಮಳೆಯ ಕಾರಣದಿಂದಾಗಿ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ
ಜುಲೈ 3 ರಂದು ರಜೆ ಘೋಷಿಸಲಾಗಿದೆ. ಈ ಬಗ್ಗೆ ಕಡಬ ತಾಲ್ಲೂಕು ತಹಶೀಲ್ದಾರರು ಅಧಿಕೃತ ಪ್ರಕಟಣೆ ನೀಡಿದ್ದಾರೆ.